Sunday, March 7, 2021

Latest Posts

ಮಲಗಿದ್ದ ಲಾರಿ ಚಾಲಕನ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ

ಹೊಸ ದಿಗಂತ ವರದಿ ಬಳ್ಳಾರಿ:

ಲಾರಿ ಚಾಲಕನ ತಲೆ ಮೇಲೆ ಕಲ್ಲು ಹಾಕಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಭಾನುವಾರ ಹೊಸಪೇಟೆಯಲ್ಲಿ ನಡೆದಿದೆ.

ಹೊಸಪೇಟೆ ನಗರದ ಎಪಿಎಂಸಿ ಬಳಿ ಈ ಘಟನೆ ನಡೆದಿದ್ದು, ಲಾರಿ ಚಾಲಕ ಚಿದಾನಂದ(40) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ತಾಲೂಕಿನ ಮರಿಯಮ್ಮನಹಳ್ಳಿ ನಿವಾಸಿ ವಾಲಕ ಚಿದಾನಂದ ಅವರು, ಮಲಗಿದ್ದ ವೇಳೆ ದುಷ್ಕರ್ಮಿಗಳು ಬೆಳಗಿನ ಜಾವ 5 ರ ಸುಮಾರಿಗೆ ಕೊಲೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ, ಹೊಸಪೆಟೆ ಬಡಾವಣೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss