Thursday, August 11, 2022

Latest Posts

ಮಲೆನಾಡಿನಲ್ಲಿ ಭಾನುವಾರ 30 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 1982ಕ್ಕೆ ಏರಿಕೆ

ಶಿವಮೊಗ್ಗ: ಮಲೆನಾಡಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 2000 ಸನಿಹ ಬಂದುನಿಂತಿದೆ. ಭಾನುವಾರ ಒಟ್ಟು 30 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1982ಕ್ಕೆ ತಲುಪಿದೆ.
ಸೋಂಕಿತರಿಗಿಂತ ಬಿಡುಗಡೆ ಆದವರ ಸಂಖ್ಯೆ ಹೆಚ್ಚಿರುವುದು ಭಾನುವಾರದ ವಿಶೇಷ. ಒಟ್ಟು 39 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಈವರೆಗೆ 1063 ಮಂದಿ ಗುಣಮುಖರಾಗಿ ಹೊರಬಂದಿದ್ದಾರೆ.
ಸೋಂಕಿತರ ಪೈಕಿ 242 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, 513 ಮಂದಿ ವಿವಿಧ ಕೋವಿಡ್ ಕೇರ್ ಸೆಂಟರ್ ಗಳಲ್ಲಿ, 48 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಹಾಗೂ 76 ಮಂದಿ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಭಾನುವಾರ ಶಿವಮೊಗ್ಗ ತಾಲೂಕಿನಲ್ಲಿ ಅತಿ ಹೆಚ್ಚು 23 ಮಂದಿಯಲ್ಲಿ ಸೋಂಕು ಕಾಣಿಸಿದೆ. ಶಿಕಾರಿಪುರ ಮತ್ತು ತೀರ್ಥಹಳ್ಳಿ ತಾಲೂಕಿನಲ್ಲಿ ತಲಾ 02, ಹೊಸನಗರ ತಾಲೂಕಿನಲ್ಲಿ ಓರ್ವರಿಗೆ ಸೋಂಕು ತಗುಲಿದೆ.
40 ಕ್ಕೆ ತಲುಪಿದ ಸಾವಿನ ಸಂಖ್ಯೆ
ಜಿಲ್ಲೆಯಲ್ಲಿ ಕೊರೋನ ಸೋಂಕಿಗೆ ಸಾಯುತ್ತಿರುವವರ ಪ್ರಮಾಣ ಕೂಡ ಹೆಚ್ಚುತ್ತಿದೆ. ಭಾನುವಾರ ಕೂಡ ಮೂವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 40 ಕ್ಕೆ ಏರಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss