Tuesday, August 16, 2022

Latest Posts

ಮಲೆನಾಡಿನಲ್ಲಿ ಮಳೆ: ಮಾಳ-ಕುದುರೆಮುಖ ರಾ.ಹೆ.169 ರ ಸಂಚಾರ ನಿಷೇಧ!

ಉಡುಪಿ: ಮಲೆನಾಡಿನಲ್ಲಿ ಮಳೆಯ ತೀವ್ರತೆ ಮುಂದುವರಿದಿದ್ದು, ಘಾಟಿ ಪ್ರದೇಶದಲ್ಲಿ ಕೆಲವು ಕಡೆಗಳಲ್ಲಿ ಗುಡ್ಡ ಜರಿಯುತ್ತಿದೆ. ಮರಗಳು ಉರುಳಿ ಬೀಳುತ್ತಿವೆ. ಈ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಮಾಳ-ಕುದುರೆಮುಖ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ತಾತ್ಕಾಲಿಕವಾಗಿ ಸಂಚಾರ ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ ಆದೇಶಿಸಿದ್ದಾರೆ.
ವಿಪರೀತ ಮಳೆ ಸುರಿಯುತ್ತಿರುವ ಕಾರಣ ಕಾರ್ಕಳ ತಾಲೂಕು ಮಾಳ ಕುದುರೆಮುಖ ರಾ.ಹೆ.169 ರಸ್ತೆಯಲ್ಲಿ ಗುಡ್ಡ ಕುಸಿತ ಉಂಟಾಗಿ ಮಣ್ಣು ರಸ್ತೆಗೆ ಬೀಳುತ್ತಿದೆ. ಅಲ್ಲದೇ ರಸ್ತೆ ಸಮೀಪ ಇರುವ ಬೃಹತ್ ಗಾತ್ರದ ಮರಗಳು ರಸ್ತೆಗೆ ಬೀಳುತ್ತಿವೆ. ಈಗಾಗಲೇ ರಸ್ತೆಗೆ ಬಿದ್ದಿರುವ ಮರಗಳನ್ನು ತೆರವುಗೊಳಿಸಲಾಗಿದ್ದು, ವಿಪರೀತ ಮಳೆಯಿಂದಾಗಿ ತೆರವು ಕಾರ್ಯಾಚರಣೆ ವಿಳಂಬವಾಗುತ್ತಿದೆ. ವಾಹನ ಸಂಚಾರ ಮಾಡಿದ್ದಲ್ಲಿ ಪ್ರಾಣ ಹಾನಿ ಸಂಭವಿಸುವ ಸಾಧ್ಯತೆ ಇದ್ದು, ಮುಂಜಾಗೃತ ಕ್ರಮವಾಗಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮಾಳ ಕುದುರೆಮುಖ ರಾ. ಹೆ. 169ರಲ್ಲಿ ಸೆ. 22ರವರೆಗೆ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss