spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮಲೆನಾಡಿನಲ್ಲಿ 500 ಸನಿಹ ತಲುಪಿದ ಕೊರೋನಾ: 42 ಮಂದಿಗೆ ಸೋಂಕು ದೃಢ

- Advertisement -Nitte

ಶಿವಮೊಗ್ಗ: ಜಿಲ್ಲೆಯಲ್ಲಿ ಇದುವರೆಗಿನ ಅತ್ಯಧಿಕ ಕೊರೋನಾ ಪಾಸಿಟಿವ್ ಪ್ರಕರಣಗಳು ಶನಿವಾರ ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 500ರ ಸನಿಹಕ್ಕೆ ಬಂದು ನಿಂತಿದೆ.
ಒಟ್ಟು 42 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ಶನಿವಾರ ದೃಢಪಟ್ಟಿದ್ದು, ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 485ಕ್ಕೆ ಏರಿಕೆಯಾಗಿದೆ. ಶನಿವಾರ 11 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದು, ಈವರೆಗೆ 180 ಮಂದಿ ಬಿಡುಗಡೆಯಾಗಿದ್ದಾರೆ.
ಕೊರೋನಾ ಸೋಂಕಿನ ಗುಣಲಕ್ಷಣ ಹೊಂದಿರುವ 129 ಮಂದಿಗೆ ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸೋಂಕಿನ ಗುಣಲಕ್ಷಣವಿಲ್ಲದ 162 ಮಂದಿಗೆ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
7 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇದುವರೆಗೂ ಜಿಲ್ಲೆಯುಲ್ಲಿ 77 ಕಂಟೈನ್‌ಮೆಂಟ್ ಜೋನ್‌ಗಳು ನಿರ್ಮಾಣವಾಗಿವೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss