Wednesday, August 10, 2022

Latest Posts

ಮಲೆನಾಡು ಪ್ರದೇಶದಲ್ಲಿನ ಕೆರೆ, ಕಟ್ಟೆಗಳಲ್ಲಿನ ನೀರಿನ ಮಟ್ಟ , ಭದ್ರತೆ ಬಗ್ಗೆ ಜಿಲ್ಲಾಧಿಕಾರಿ ಡಿಸಿ ಶೆಟ್ಟೆಣ್ಣನವರ ಪರಿಶೀಲನೆ

ಹಾವೇರಿ: ಜಿಲ್ಲೆಯಲ್ಲಿ ಆಗುತ್ತಿರುವ ಅಧಿಕ ಮಳೆಯಿಂದ ಜಿಲ್ಲೆಯಲ್ಲಿನ ಪ್ರಮುಖವಾಗಿ ಮಲೆನಾಡು ಪ್ರದೇಶದಲ್ಲಿನ ಕೆರೆ, ಕಟ್ಟೆಗಳಲ್ಲಿನ ನೀರಿನ ಮಟ್ಟ ಮತ್ತು ಕೆರೆಗಳ ಭದ್ರತೆ ಕುರಿತು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣನವರ ಪರಿಶೀಲನೆ ನಡೆಸಿದರು.
ಗುರುವಾರ ಜಿಲ್ಲೆಯ ಶಿಗ್ಗಾಂವ ನಗರದ ನಾಗನೂರ ಕೆರೆ, ಬಾಡದ ಬಕಾಸೂರನ ಕೆರೆ, ಹುನಗುಂದ ಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಅವರು ಬಂಕಾಪುರ ಪಟ್ಟಣದಲ್ಲಿ ಮಳೆಯಿಂದ ಹಾನಿಯಾದ ಮನೆಯನ್ನು ವೀಕ್ಷಣೆ ನಡೆಸಿದರು. ಈ ಸಂದರ್ಭದಲ್ಲಿ ಜಿ.ಪಂ ಸಿಇಓ ರಮೇಶ ದೇಸಾಯಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ತಹಶೀಲ್ದಾರ್ ಮಲ್ಲಿಕಾರ್ಜುನ ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss