ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಭಾರತ ಮಲೇರಿಯಾ ರೋಗದ ವಿರುದ್ಧದ ಹೋರಾಟದಲ್ಲಿ ಉತ್ತಮ ಪ್ರಗತಿ ಸಾಧಿಸಿದ್ದು, 2000-2019ರ ಅವಧಿಯಲ್ಲಿ ಭಾರತದಲ್ಲಿ ಮಲೇರಿಯಾ ಪ್ರಕರಣಗಳ ಸಂಖ್ಯೆ ಗಣನೀಯ ಇಳಿಕೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.
ಸೋಮವಾರ ವಿಶ್ವ ಸಂಸ್ಥೆ ‘ವಿಶ್ವ ಮಲೇರಿಯಾ ವರದಿ-2020’ನ್ನು ಬಿಡುಗಡೆ ಮಾಡಿದೆ. ವರದಿಯ ಅನ್ವಯ 2000ನೇ ಇಸವಿಯಲ್ಲಿ ಭಾರತದಲ್ಲಿ 2 ಕೋಟಿಯಷ್ಟಿದ್ದ ಮಲೇರಿಯಾ ಪ್ರಕರಣಗಳು ಕಳೆದ ನಾಲ್ಕು ವರ್ಷಗಳಲ್ಲಿ ವಾರ್ಷಿಕವಾಗಿ ಈ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ಮಲೇರಿಯಾಗೆ 4.09 ಲಕ್ಷ ಹಾಗೂ 2018ರಲ್ಲಿ 4.11 ಲಕ್ಷ ಮಂದಿ ಸಾವನ್ನಪ್ಪಿದ್ದರು ಎಂದು ವರದಿ ಹೇಳಿದೆ.
ಮಲೇರಿಯಾ ರೋಗದ ವಿರುದ್ಧದ ಹೋರಾಟದಲ್ಲಿ ಭಾರತ ಉತ್ತಮ ಪ್ರಗತಿ ಸಾಧಿಸಿದ್ದು, ಆಗ್ನೇಯ ಏಷ್ಯಾದ ರಾಷ್ಟ್ರಗಳು ಮಲೇರಿಯಾ ರೋಗ ನಿಯಂತ್ರಣದಲ್ಲಿ ಮುಂಚೂಣಿಯಲ್ಲಿವೆ. ಸಾವಿನ ಪ್ರಕರಣಗಳು ಶೇ 73 ರಿಂದ ಶೇ 74ರಷ್ಟು ಕಡಿಮೆಯಾಗಿವೆ’ ಎಂದು ಡಬ್ಲ್ಯುಎಚ್ಒ ಮಹಾನಿರ್ದೇಶಕ ಡಾ. ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಹೇಳಿದ್ದಾರೆ.