Friday, June 2, 2023

Latest Posts

ಮಲ್ಲಿಕಾರ್ಜುನ ಖರ್ಗೆಯವರು ಸಿಎಂಯಾದ್ರೆ ಕೈಕೆಳಗೆ ಕೆಲಸ ಮಾಡಲು ಸಿದ್ಧ: ಡಿಕೆ ಶಿವಕುಮಾರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge)ಅವರು ಮುಖ್ಯಮಂತ್ರಿಯಾದರೆ ತ್ಯಾಗಕ್ಕೂ ಸಿದ್ಧ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಖರ್ಗೆ ಕೈಕೆಳಗೆ ಕೆಲಸ ಮಾಡುವುದಕ್ಕೆ ನಾನು ಇಷ್ಟಪಡುತ್ತೇನೆ. ಖರ್ಗೆ ನಮ್ಮ ಪಕ್ಷದ ಆಸ್ತಿ. ರಾಜ್ಯಕ್ಕೆ ಅವರ ಸೇವೆ ಅಗತ್ಯವಿದೆ. ಮಲ್ಲಿಕಾರ್ಜುನ ಖರ್ಗೆ ನನಗಿಂತ ರಾಜಕೀಯದಲ್ಲಿ ದೊಡ್ಡವರು ಎಂದು ಹೊಗಳಿದ್ದಾರೆ.

ಅವರು ಶಾಸಕಾಂಗ ಪಕ್ಷದ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷದ ಕೆಲಸಕ್ಕೆ ಮುಂದಾದವರು. ಹೀಗಾಗಿ ಖರ್ಗೆಯವರು ಬಯಸಿದ್ರೆ ನಾನು ನನ್ನ ಅವಕಾಶ ಬಿಟ್ಟು ಕೊಡ್ತೀನಿ. ಅವರ ಕೈಕೆಳಗೆ ಕೆಲಸ ಮಾಡಲು ಸಿದ್ಧನಿದ್ದೇನೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!