ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, June 22, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮಳೆಯ ಅಬ್ಬರ-ಭೂಕುಸಿತ: ಕೊಡಗು ಜಿಲ್ಲಾಧಿಕಾರಿ ಕಚೇರಿ ತಾತ್ಕಾಲಿಕ ಸ್ಥಳಾಂತರ

ಮಡಿಕೇರಿ: ಮಡಿಕೇರಿ ನಗರದಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, ಪರಿಣಾಮವಾಗಿ ಅಲ್ಲಲ್ಲಿ ಭೂಕುಸಿತದ ಪ್ರಕರಣಗಳು ವರದಿಯಾಗುತ್ತಿವೆ.
ನಗರದ ಪ್ರವಾಸಿ ಮಂದಿರದ ಬಳಿ ಮಡಿಕೇರಿ – ಮಂಗಳೂರು ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿದ್ದು, ಇದರಿಂದಾಗಿ ಜಿಲ್ಲಾಧಿಕಾರಿ ಕಚೇರಿಯೂ ಕುಸಿಯುವ ಆಕ ಎದುರಾಗಿದೆ.
ಕಚೇರಿ ಮುಂಭಾಗದ ಬರೆ ಮಂಗಳೂರು ರಸ್ತೆಗೆ ಜಾರತೊಡಗಿದ್ದು, ಭಾರೀ ಪ್ರಮಾಣದ ಮಣ್ಣು ರಸ್ತೆಯಲ್ಲಿ ಶೇಖರಣೆಯಾಗಿದೆ.
ತಜ್ಞರ ಸೂಚನೆ ಮೇರೆಗೆ ಇದೀಗ ಜಿಲ್ಲಾಧಿಕಾರಿ ಕಚೇರಿಯ ಪ್ರಮುಖ ವಿಭಾಗಗಳನ್ನು ಸ್ಥಳಾಂತರಿಸುವ ಕಾರ್ಯ ಆರಂಭಗೊಂಡಿದೆ.ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದ ವಿಭಾಗವನ್ನು ಮಡಿಕೇರಿ ನಗರಸಭಾ ಕಾರ್ಯಾಲಯಕ್ಕೆ ಸ್ಥಳಾಂತರಿಸಲಾಗುತ್ತಿದ್ದು, ಉಳಿದ ಇಲಾಖಾ ಕಛೇರಿಗಳನ್ನು ಸದ್ಯಕ್ಕೆ ಬಂದ್ ಮಾಡಲಾಗಿದೆ.
ಮಳೆಯ ತೀವ್ರತೆ ಕಡಿಮೆಯಾಗುವವರೆಗೆ ಜಿಲ್ಲಾಧಿಕಾರಿಗಳು ನಗರಸಭಾ ಕಾರ್ಯಾಲಯದಿಂದಲೇ ತಮ್ಮ ಕೆಲಸ ಕಾರ್ಯಗಳನ್ನು ನಿರ್ವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss