Latest Posts

ಮಾಜಿ ಸಚಿವ ಬಿ.ಸತ್ಯನಾರಾಯಣ ವಿಧಿವಶ

ತುಮಕೂರು: ಮಾಜಿ ಸಚಿವರಾದರು ಶಿರಾ ಶಾಸಕ ಬಿ.ಸತ್ಯನಾರಾಯಣ ಅವರು ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕಿಡ್ನಿಸಂಬಂಧಿತ ಆರೋಗ್ಯ ಸಮಸ್ಯೆ ಯಿಂದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ...

ಅಮಿತ್‍ ಶಾ -ಯಡಿಯೂರಪ್ಪ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಉರುಳುಸೇವೆ

ಮಂಡ್ಯ : ಕೊರೋನಾ ಸೋಂಕಿನಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಕೇಂದ್ರದ ಗೃಹ ಸಚಿವ ಅಮಿತ್‍ಶಾ ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ನಗರದ ಶ್ರೀ ವಿದ್ಯಾಗಣಪತಿ ದೇವಸ್ಥಾನದಲ್ಲಿ...

ಆತ್ಮಹತ್ಯೆಗೆ ಶರಣಾದ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಸಚಿವ ಗೋಪಾಲಯ್ಯ

ಹಾಸನ: ಇತ್ತೀಚೆಗೆ ಆತ್ಮಹತ್ಯೆಗೆ ಶರಣಾದ ಚನ್ನರಾಯಪಟ್ಟಣ ನಗರ ಠಾಣೆ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಅರಸೀಕೆರೆ ತಾಲ್ಲೂಕಿನ ಲಾಳನಕೆರೆಯಲ್ಲಿರುವ ಕಿರಣ್...

ಮಳೆಯ ಆರ್ಭಟ: ಕಬಿನಿ ಜಲಾಶಯದಲ್ಲಿ ಏರುತ್ತಿದೆ ನೀರಿನ ಮಟ್ಟ: ಜಲಾಶಯಕ್ಕೆ ಹರಿದು ಬರುತ್ತಿದೆ 11 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು

sharing is caring...!

ಎಸ್.ಮಹೇಶ್
ಮೈಸೂರು: ಮಳೆಯ ಆರ್ಭಟದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಇದೀಗ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಇದರಿಂದಾಗಿ ಜಲಾಶಯದ ನೀರಿನ ಮಟ್ಟ ದಿನೇ ದಿನೇ ಹೆಚ್ಚಳವಾಗುತ್ತಿದ್ದು, ಇನ್ನೊಂದು ವಾರ ಅಥವಾ ೧೫ ದಿನದೊಳಗೆ ಜಲಾಶಯ ಭರ್ತಿಯಾಗುವ ಸಾಧ್ಯತೆಯಿದೆ.
೨೨೮೪ ಅಡಿ ಎತ್ತರವಿರುವ ಕಬಿನಿ ಜಲಾಶಯದ ನೀರಿನ ಸಂಗ್ರಹ ಸಾಮಾರ್ಥ್ಯ ೧೯.೫೨ ಟಿಎಂಸಿಯಾಗಿದ್ದು, ಜುಲೈ ೨ ರಂದು ಜಲಾಶಯದ ನೀರಿನ ಮಟ್ಟ ೨೨೬೧.೭೩ ಅಡಿಯಿತ್ತು. ಆಗ ಜಲಾಶಯಕ್ಕೆ ೧೯೦೭ ಕ್ಯೂಸೆಕ್ ನೀರು ಹರಿದು ಬರುತ್ತಿತ್ತು. ಆಗ ಜಲಾಶಯದ ಹಿನ್ನೀರಿನ ಪ್ರದೇಶದಲ್ಲಿ ೧೦ ಮಿಮೀ ಮಳೆಯಾಗುತ್ತಿತ್ತು. ೭.೯೮ ಟಿಎಂಸಿ ನೀರು ಸಂಗ್ರಹವಾಗಿತ್ತು. ಜುಲೈ ೩ ರಿಂದ ಕೇರಳದ ವೈನಾಡು ಹಾಗೂ ಪಶ್ಚಿಮ ಘಟ್ಟ ಅರಣ್ಯ ಪ್ರದೇಶಗಳಲ್ಲಿ ಮಳೆ ಜೋರಾಗಿ ಸುರಿಯುತ್ತಿರುವ ಕಾರಣ, ಕಬಿನಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣವೂ ನಿರಂತವಾಗಿ ಹೆಚ್ಚುತ್ತಲೇ ಹೋಗಿದೆ. ಪ್ರತಿ ದಿನ ನೀರಿನ ಸಂಗ್ರಹ ಮಟ್ಟ ಒಂದೊAದು ಅಡಿ ಏರುತ್ತಲೇ ಹೋಗಿದೆ.
ಬುಧವಾರ ಬೆಳಗ್ಗೆ ಜಲಾಶಯದ ಹಿನ್ನೀರಿನ ಪ್ರದೇಶದಲ್ಲಿ ೨೫ ಮಿಮೀಟರ್ ಮಳೆಯಾಗುತ್ತಿರುವುದರಿಂದ ಜಲಾಶಯಕ್ಕೆ ೧೧,೩೨೪ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಇದರಿಂದಾಗಿ ಜಲಾಶಯದ ನೀರಿನ ಮಟ್ಟ ೨೨೬೭.೮೮ ಅಡಿಗೆ ಏರಿಕೆಯಾಗಿದೆ. ನದಿಗೆ ೧೫೦೦ ಕ್ಯೂಸೆಕ್ ನೀರನ್ನು ಹರಿಬಿಡಲಾಗುತ್ತಿದೆ. ಈಗ ಜಲಾಶಯದಲ್ಲಿ ೧೦.೬೭ ಟಿಎಂಸಿ ನೀರು ಸಂಗ್ರಹವಾಗಿದೆ.
ಕಳೆದ ವರ್ಷ ಇದೇ ಅವಧಿಯಲ್ಲಿ ಜಲಾಶಯದಲ್ಲಿ ೨೨೬೧.೯೭ ಅಡಿ ನೀರಿನ ಸಂಗ್ರಹವಿತ್ತು. ಕಳೆದ ಬಾರಿಗೆ ಹೋಲಿಸಿದರೆ ಈ ವರ್ಷ ೭ ಅಡಿ ನೀರು ಹೆಚ್ಚಾಗಿಯೇ ಸಂಗ್ರಹವಾಗಿದೆ.
ವಾರದೊಳಗೆ ಭರ್ತಿಯಾಗುವ ಸಾಧ್ಯತೆ
ಇಡೀ ಕಾವೇರಿ ಜಲಾನಯನ ಪ್ರದೇಶದಲ್ಲಿ ಮೊದಲು ಭರ್ತಿಯಾಗುವ ಜಲಾಶಯವೆಂದರೆ ಅದು ಕಬಿನಿ ಮಾತ್ರ. ಈ ಬಾರಿ ಅವಧಿಗೂ ಮುನ್ನಾವೇ ಭರ್ತಿಯಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಜಲಾಶಯದ ಹಿನ್ನೀರಿನ ಪ್ರದೇಶದಲ್ಲಿ ಮಳೆಯ ಆರ್ಭಟ ದಿನೇ ದಿನೇ ಮತ್ತಷ್ಟು ಹೆಚ್ಚಾಗುತ್ತಿರುವ ಕಾರಣ ಯಾವುದೇ ಕ್ಷಣಕ್ಕೆ ಭಾರೀ ಪ್ರಮಾಣದಲ್ಲಿ ನೀರು ಜಲಾಶಯಕ್ಕೆ ಹರಿದು ಬರುವ ಸಾಧ್ಯತೆಗಳಿವೆ. ಹಾಗಾಗಿ ಇನ್ನೊಂದು ವಾರ ಅಥವಾ ೧೫ ದಿನದೊಳಗೆ ಕಬಿನಿ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗುವ ಸಾಧ್ಯತೆಯಿದೆ.
ತಮಿಳುನಾಡಿಗೆ ಹರಿದು ಹೋಗುತ್ತಿದೆ ನೀರು
ತಮಿಳುನಾಡಿನ ಕಾವೇರಿ ಜಲಾನಯನ ಪ್ರದೇಶದ ನೀರಿನ ದಾಹವನ್ನು ಮೊದಲಿಗೆ ತೀರಿಸುವುದೇ ಈ ಕಬಿನಿ ಜಲಾಶಯ. ಎಲ್ಲಾ ಜಲಾಶಯಗಳಿಗಿಂತ ಕಬಿನಿ ಜಲಾಶಯವೇ ಬಹಳ ವೇಗವಾಗಿ ಭರ್ತಿಯಾಗುವ ಕಾರಣ, ತಮಿಳುನಾಡಿಗೆ ಈ ಜಲಾಶಯದಿಂದ ಸಾಕಷ್ಟು ಪ್ರಮಾಣದಲ್ಲಿ ಪ್ರತಿ ವರ್ಷವೂ ನೀರನ್ನು ಹರಿಸಲಾಗುತ್ತದೆ. ಕೆಲವೊಂದು ವರ್ಷಗಳಲ್ಲಿ ಈ ಜಲಾಶಯ ಎರಡು ಬಾರಿ ಭರ್ತಿಯಾಗಿದೆ. ಅಲ್ಲದೆ ಭಾರೀ ಪ್ರಮಾಣದಲ್ಲಿ ತಮಿಳುನಾಡಿಗೆ ನೀರು ಹರಿಸಲಾಗಿದೆ. ಹೀಗಾಗಿಯೇ ತಮಿಳುನಾಡಿಗೆ ನೀರು ಕೊಡಲೆಂದು ಕಟ್ಟಿದ ಜಲಾಶಯ ಎಂಬ ಕುಖ್ಯಾತಿಗೆ ಕಬಿನಿ ಜಲಾಶಯ ಪಾತ್ರವಾಗಿದೆ.
ರೈತರ ಮೊಗದಲ್ಲಿ ಹರ್ಷ
ಕಬಿನಿ ಜಲಾಶಯ ಭರ್ತಿಯಾಗುವತ್ತ ಸಾಗುತ್ತಿರುವುದು ಕರ್ನಾಟಕ ಮಾತ್ರವಲ್ಲ, ತಮಿಳುನಾಡಿನ ಕಾವೇರಿ ಜಲಾನಯನ ಪ್ರದೇಶದ ರೈತರಿಗೂ ಹರ್ಷವನ್ನುಂಟು ಮಾಡಿದೆ.
ಕರ್ನಾಟಕದ ಕಬಿನಿ ಜಲಾಶಯದ ವ್ಯಾಪ್ತಿಗೆ ಬರುವ ೧.೨೦ ಲಕ್ಷ ಹೆಕ್ಟರ್ ಪ್ರದೇಶದಲ್ಲಿ ವಿವಿಧ ಬೆಳೆಗಳನ್ನು ರೈತರು ಬೆಳೆಯುತ್ತಿದ್ದಾರೆ. ಈ ಬಾರಿ ಕೊರೋನಾ ಮಹಾಮಾರಿಯ ಪ್ರಾಣ ಭೀತಿಯ ನಡುವೆ ರೈತರು ವಿವಿಧ ಬೆಳೆಗಳನ್ನು ಬೆಳೆದಿದ್ದಾರೆ, ಬೆಳೆಯುತ್ತಿದ್ದಾರೆ. ಕಬಿನಿ ಜಲಾಶಯ ಭರ್ತಿಯಾಗಿ, ನಾಲೆಗಳ ಮೂಲಕ ನೀರು ಬಿಡುವ ಕಾರಣ, ಈ ಬಾರಿ ಬೆಳೆಗಳಿಗೆ ನೀರಿನ ಕೊರತೆಯಾಗದು ಎಂಬುದು ರೈತರ ಆಶಾವಾದವಾಗಿದೆ.
ತಮಿಳಿಗರಿಗೂ ನೆಮ್ಮದಿ
ತಮಿಳುನಾಡಿನ ಮೆಟ್ಟೂರು ಜಲಾಶಯದಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚಾಗಿಯೇ ನೀರು ಸಂಗ್ರಹಣೆಯಾಗಿದೆ. ಅಲ್ಲದೆ ಈಗ ಕಬಿನಿ ಜಲಾಶಯದಿಂದ ನಿತ್ಯವೂ ೧೫೦೦ ಕ್ಯೂಸೆಕ್ ನೀರು ಹರಿದು ಬರುತ್ತಿರುವುದು, ಹಾಗೂ ಜಲಾಶಯ ಭರ್ತಿಯಾದರೆ, ಒಳ ಬರುವ ನೀರನ್ನು ಹಾಗೆಯೇ ನದಿಗೆ ಬಿಡುವ ಕಾರಣ, ಮೆಟ್ಟೂರು ಜಲಾಶಯಕ್ಕೆ ಮತ್ತಷ್ಟು ಭಾರೀ ಪ್ರಮಾಣದ ನೀರು ಹರಿದು ಬಂದು ನೀರು ಸಂಗ್ರಹಣೆಯ ಮಟ್ಟ ಏರಿಕೆಯಾಗುವ ಸಾಧ್ಯತೆಯಿದೆ. ಹಾಗಾಗಿ ಸಾಂಬ ಹಾಗೂ ಕುರುವೈ ಬೆಳೆಗಳನ್ನು ಬೆಳೆಯುವುದಕ್ಕೆ ಈ ಬಾರಿ ನೀರಿನ ಸಮಸ್ಯೆಯಾಗುವುದಿಲ್ಲ ಎಂಬುದು ತಮಿಳುನಾಡಿನ ರೈತರ ಆಶಾವಾದವಾಗಿದೆ.

Latest Posts

ಮಾಜಿ ಸಚಿವ ಬಿ.ಸತ್ಯನಾರಾಯಣ ವಿಧಿವಶ

ತುಮಕೂರು: ಮಾಜಿ ಸಚಿವರಾದರು ಶಿರಾ ಶಾಸಕ ಬಿ.ಸತ್ಯನಾರಾಯಣ ಅವರು ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕಿಡ್ನಿಸಂಬಂಧಿತ ಆರೋಗ್ಯ ಸಮಸ್ಯೆ ಯಿಂದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ...

ಅಮಿತ್‍ ಶಾ -ಯಡಿಯೂರಪ್ಪ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಉರುಳುಸೇವೆ

ಮಂಡ್ಯ : ಕೊರೋನಾ ಸೋಂಕಿನಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಕೇಂದ್ರದ ಗೃಹ ಸಚಿವ ಅಮಿತ್‍ಶಾ ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ನಗರದ ಶ್ರೀ ವಿದ್ಯಾಗಣಪತಿ ದೇವಸ್ಥಾನದಲ್ಲಿ...

ಆತ್ಮಹತ್ಯೆಗೆ ಶರಣಾದ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಸಚಿವ ಗೋಪಾಲಯ್ಯ

ಹಾಸನ: ಇತ್ತೀಚೆಗೆ ಆತ್ಮಹತ್ಯೆಗೆ ಶರಣಾದ ಚನ್ನರಾಯಪಟ್ಟಣ ನಗರ ಠಾಣೆ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಅರಸೀಕೆರೆ ತಾಲ್ಲೂಕಿನ ಲಾಳನಕೆರೆಯಲ್ಲಿರುವ ಕಿರಣ್...

ಯಾವುದೇ ಕ್ಷಣದಲ್ಲಿ ಕಬಿನಿ ಜಲಾಶಯ ಭರ್ತಿ: ಸುರಕ್ಷಿತ ಸ್ಥಳಕ್ಕೆ ತೆರಳಲು ನದಿ ಪಾತ್ರದ ಜನರಿಗೆ ಸೂಚನೆ

ಮೈಸೂರು : ಮೈಸೂರು ಜಿಲ್ಲೆಯ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಯಾವುದೇ ಕ್ಷಣದಲ್ಲಿ ಭರ್ತಿಯಾಗಲಿದ್ದು, ನದಿಗೆ ಅಪಾರ ಪ್ರಮಾಣದಲ್ಲಿ ನೀರು ಬಿಡುವ ಕಾರಣ ನದಿ ಪಾತ್ರದಲ್ಲಿರುವ ಜನರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ...

Don't Miss

ಮಾಜಿ ಸಚಿವ ಬಿ.ಸತ್ಯನಾರಾಯಣ ವಿಧಿವಶ

ತುಮಕೂರು: ಮಾಜಿ ಸಚಿವರಾದರು ಶಿರಾ ಶಾಸಕ ಬಿ.ಸತ್ಯನಾರಾಯಣ ಅವರು ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕಿಡ್ನಿಸಂಬಂಧಿತ ಆರೋಗ್ಯ ಸಮಸ್ಯೆ ಯಿಂದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ...

ಅಮಿತ್‍ ಶಾ -ಯಡಿಯೂರಪ್ಪ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಉರುಳುಸೇವೆ

ಮಂಡ್ಯ : ಕೊರೋನಾ ಸೋಂಕಿನಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಕೇಂದ್ರದ ಗೃಹ ಸಚಿವ ಅಮಿತ್‍ಶಾ ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ನಗರದ ಶ್ರೀ ವಿದ್ಯಾಗಣಪತಿ ದೇವಸ್ಥಾನದಲ್ಲಿ...

ಆತ್ಮಹತ್ಯೆಗೆ ಶರಣಾದ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಸಚಿವ ಗೋಪಾಲಯ್ಯ

ಹಾಸನ: ಇತ್ತೀಚೆಗೆ ಆತ್ಮಹತ್ಯೆಗೆ ಶರಣಾದ ಚನ್ನರಾಯಪಟ್ಟಣ ನಗರ ಠಾಣೆ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಅರಸೀಕೆರೆ ತಾಲ್ಲೂಕಿನ ಲಾಳನಕೆರೆಯಲ್ಲಿರುವ ಕಿರಣ್...
error: Content is protected !!