Tuesday, November 24, 2020

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ಮಳೆಯ ಸಿಂಚನದ ನಡುವೆಯೂ ಕರಗ ಪೂಜೆಯೊಂದಿಗೆ ಮಡಿಕೇರಿ ದಸರಾಕ್ಕೆ ಚಾಲನೆ

ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾಕ್ಕೆ ನಗರದ ನಾಲ್ಕು ಶಕ್ತ ದೇವತೆಗಳ ಕರಗಳಿಗೆ ಪೂಜೆ ಸಲ್ಲಿಸುವುದರೊಂದಿಗೆ ಶನಿವಾರ ಸಂಜೆ ಮಳೆಯ ಸಿಂಚನದ ನಡುವೆ ಚಾಲನೆ ನೀಡಲಾಯಿತು.
ನಗರದ ನಾಲ್ಕು ಶಕ್ತಿ ದೇವತೆಗಳಾದ ಶ್ರೀ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ, ಶ್ರೀ ಕಂಚಿ ಕಾಮಾಕ್ಷಿಯಮ್ಮ, ಶ್ರೀ ದಂಡಿನ ಮಾರಿಯಮ್ಮ ಹಾಗೂ ಶ್ರೀ ಕೋಟೆ ಮಾರಿಯಮ್ಮ ದೇವಾಲಯಗಳ ಕರಗಗಳಿಗೆ ಪಂಪಿನ ಕೆರೆ ಬಳಿ ಸಾಂಪ್ರದಾಯಿಕ ಪೂಜೆ, ವಿಧಿ ವಿಧಾನಗಳನ್ನು ನೆರವೇರಿಸುವುದರೊಂದಿಗೆ ನವರಾತ್ರಿಯ ಉತ್ಸವಕ್ಕೆ ಚಾಲನೆ ನೀಡಲಾಯಿತು.
ಅಪರಾಹ್ನ ನಾಲ್ಕು ದೇವಾಲಯಗಳಿಂದ ಕರಗ ಪೂಜೆಗೆ ಅಗತ್ಯವಿರುವ ಸಾಮಾಗ್ರಿಗಳೊಂದಿಗೆ ಪಂಪಿನ ಕೆರೆಗೆ ತೆರಳಿದ ಕರಗ ಹೊರುವ ಪೂಜಾರಿಗಳು ಹಾಗೂ ದೇವಾಲಯಗಳ ಪ್ರಮುಖರು ಸ್ನಾನ ಮುಗಿಸಿ, ಕರಗಗಳನ್ನು ಅಣಿಗೊಳಿಸಿದರು.
ಸಂಜೆ 5.45ರ ಸುಮಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಶಾಸಕ ಎಂ.ಪಿ.ಅಪ್ಪಚ್ಚುರಂಜನ್, ವಿಧಾನಪರಿಷತ್ ಸದಸ್ಯರಾದ ಎಂ.ಪಿ.ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ದಸರಾ ಹಾಗೂ ದಶಮಂಟಪ ಸಮಿತಿ ಪದಾಧಿಕಾರಿಗಳು ಪೂಜೆ ಸಲ್ಲಿಸಿದರು. ಬಳಿಕ ಮಳೆಯ ನಡುವೆಯೇ ನಾಲ್ಕು ಕರಗಗಳು ಒಂದರ ಹಿಂದೆ ಒಂದರಂತೆ ಪಂಪಿನಕೆರೆಯಿಂದ ಮುಖ್ಯ ರಸ್ತೆಗೆ ಆಗಮಿಸಿ ಬಳಿಕ ಬನ್ನಿ ಮಂಟಪ, ಶ್ರೀ ಕೋದಂಡರಾಮ ದೇವಾಲಯ, ಶ್ರೀ ಚೌಡೇಶ್ವರಿ ದೇವಾಲಯ, ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯ ಹಾಗೂ ಇತಿಹಾಸ ಪ್ರಸಿದ್ಧ ಪೇಟೆ ಶ್ರೀರಾಮಮಂದಿರ ದೇವಾಲಯಗಳಲ್ಲಿ ಪೂಜೆ ಸ್ವೀಕರಿಸಿ ನಂತರ ತಮ್ಮ ತಮ್ಮ ದೇವಾಲಯಗಳಿಗೆ ತೆರಳಿದವು.
ನಾಲ್ಕು ಕರಗಗಳು ನಗರ ಸಂಚಾರವನ್ನು ಸಾಂಕೇತಿಕವಾಗಿ ಆರಂಭಿಸಿದ್ದು, ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಮನೆ ಪೂಜೆಗೆ ತೆರಳುತ್ತಿಲ್ಲ. ವಿಜಯದಶಮಿಯ ದಿನವಾದ ಅ.26 ರಂದು ಮಧ್ಯರಾತ್ರಿ ಬನ್ನಿ ಕಡಿಯುವುದರೊಂದಿಗೆ ದಸರಾ ಮಹೋತ್ಸವಕ್ಕೆ ತೆರೆ ಎಳೆಯಲಾಗುತ್ತದೆ. ಎರಡು ದಿನಗಳಿಗೆ ಮಾತ್ರ ಕರಗಗಳ ಸಂಚಾರವನ್ನು ಸೀಮಿತಗೊಳಿಸಲಾಗಿದ್ದು, ನವರಾತ್ರಿಯ ಒಂಭತ್ತು ದಿನಗಳಲ್ಲಿ ನಾಲ್ಕು ಶಕ್ತಿ ದೇವಾಲಯಗಳಲ್ಲಿ ಕರಗಗಳಿಗೆ ವಿಶೇಷ ಪೂಜೆಗಳು ಎಂದಿನಂತೆ ನಡೆಯಲಿದೆ.
ಕರಗ ಪೂಜೆ ಸಂದರ್ಭ ವಿವಿಧ ಇಲಾಖೆ ಅಧಿಕಾರಿಗಳು, ವಿವಿಧ ದೇವಾಲಯಗಳ ಪ್ರಮುಖರು, ದಸರಾ ಹಾಗೂ ದಶಮಂಟಪ ಸಮಿತಿ ಪದಾಧಿಕಾರಿಗಳು ಹಾಜರಿದ್ದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ನಾಳೆ ರೆಬಲ್‍ಸ್ಟಾರ್ ಅಂಬರೀಶ್ ಕಂಚಿನ ಪ್ರತಿಮೆ ಅನಾವರಣ

ಹೊಸ ದಿಗಂತ ವರದಿ, ಮಂಡ್ಯ: ರೆಬಲ್‍ಸ್ಟಾರ್ ಅಂಬರೀಶ್ ಅವರ ಅಭಿಮಾನಿಗಳು ಮದ್ದೂರು ತಾಲೂಕು ಹೊಟ್ಟೇಗೌಡನದೊಡ್ಡಿ ಗ್ರಾಮದಲ್ಲಿ ಅಂಬರೀಶ್ ಗುಡಿ ನಿರ್ಮಿಸಿ, ಕಂಚಿನ ಪ್ರತಿಮೆ ಪ್ರತಿಷ್ಠಾಪಿಸಿದ್ದಾರೆ. ಸಂಸದೆ ಸುಮಲತಾ ಅಂಬರೀಶ್ ಅವರು ನಾಳೆ ಪ್ರತಿಮೆ ಅನಾವರಣ...

Don't Miss

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...
error: Content is protected !!