spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮಳೆ ಕಡಿಮೆಯಾದರೂ ಕಡಲ ಆರ್ಭಟ ಜೋರು; ಸೋಮೇಶ್ವರದಲ್ಲಿ ರಸ್ತೆ ಕಡಲಪಾಲು: ಮನೆಗಳಿಗೆ ಹಾನಿ

- Advertisement -Nitte

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಅಷ್ಟಾಗಿ ಇಲ್ಲದಿದ್ದರೂ ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಜೀವ ನದಿಗಳು ತುಂಬಿ ಹರಿಯುತ್ತಿವೆ. ನದಿಗಳು ತುಂಬಿ ಹರಿಯುತ್ತಿರುವುದರಿಂದ ಹಲವೆಡೆ ಹಾನಿ ಉಂಟಾಗುತ್ತಿದೆ. ಈ ನಡುವೆ ಕಡಲ ಆರ್ಭಟವೂ ಹೆಚ್ಚಾಗಿದ್ದು, ಕಡಲ ತಡಿಯ ಜನತೆ ಕಡಲ್ಕೊರೆತದಿಂದಾಗಿ ಭೀತಿ ಎದುರಿಸುತ್ತಿದ್ದಾರೆ.
ಶುಕ್ರವಾರ ಇಲ್ಲಿನ ಸೋಮೇಶ್ವರ ಬಟ್ಟಪ್ಪಾಡಿ ಎಂಬಲ್ಲಿ ಕಡಲ ಆರ್ಭಟಕ್ಕೆ ಸಂಪೂರ್ಣ ರಸ್ತೆಯೇ ಕಡಲ ಪಾಲಾಗಿದೆ. ಸತತವಾಗಿ ಅಪ್ಪಳಿಸುತ್ತಿರುವ ಕಡಲ ಅಲೆಗಳು ಈ ಭಾಗದ ಮನೆಗಳಿಗೆ ಹಾನಿ ತಂದಿತ್ತಿದೆ.
ಇನ್ನು ಚಾರ್ಮಾಡಿ ಘಾಟಿ ರಸ್ತೆಯುದ್ದಕ್ಕೂ ಅಲ್ಲಲ್ಲಿ ಭೂಕುಸಿತ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಇಲ್ಲಿನ ರಸ್ತೆಯನ್ನು ಬಂದ್ ಮಾಡಲಾಗಿದೆ. ನದಿಗಲು ತುಂಬಿ ಹರಿಯುತ್ತಿರುವುದರಿಂದ ಈ ಭಾಗದ ಜನತೆ  ನೆರೆ ಭೀತಿಯನ್ನು ಎದುರಿಸುತ್ತಿದ್ದಾರೆ. ನೇತ್ರಾವತಿ, ಕುಮಾರಧಾರಾ ನದಿಗಳು ಗರಿಷ್ಠ ಮಟ್ಟದಲ್ಲಿ ಹರಿಯುತ್ತಿವೆ. ಸುಬ್ರಹ್ಮಣ್ಯ ಸಮೀಪದ ಬಿಸಿಲೆ ಘಾಟ್ ರಸ್ತೆಯಲ್ಲೂ ಅಲ್ಲಲ್ಲಿ ಭೂಕುಸಿತವಾಗಿದ್ದು, ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss