spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, May 22, 2022

Latest Posts

ಮಳೆ ಹಾನಿ ವೀಕ್ಷಿಸಲು ಸೈನಿಕ ಶಾಲೆಯ ಹೆಲಿಪ್ಯಾಡ್‍ಗೆ ಆಗಮಿಸಿದ ಕೇಂದ್ರ ತಂಡ

ಮಡಿಕೇರಿ: ಕಳೆದ ಆಗಸ್ಟ್ ತಿಂಗಳಲ್ಲಿ ಉಂಟಾದ ಮಳೆ ಹಾನಿ ವೀಕ್ಷಿಸಲು ಮಂಗಳವಾರ ಕೇಂದ್ರ ತಂಡವು ಕೂಡಿಗೆ ಸೈನಿಕ ಶಾಲೆಯ ಹೆಲಿಪ್ಯಾಡ್‍ಗೆ ಆಗಮಿಸಿತು.
ಭಾರತ ಸರ್ಕಾರದ ಗೃಹ ಮಂತ್ರಾಲಯದ ಜಂಟಿ ಕಾರ್ಯದರ್ಶಿ ಕೆ.ವಿ.ಪ್ರತಾಪ್, ವಿತ್ತ ಸಚಿವಾಲಯದ ಡಾ.ಭಾರ್ತೇಂದು ಕುಮಾರ್ ಸಿಂಗ್ ಹಾಗೂ ಭಾರತ ಸರ್ಕಾರದ ಕೆ.ಎಸ್.ಡಿ.ಎಂ.ಎ. ಆಯುಕ್ತ ಮನೋಜ್ ರಂಜನ್ ಅವರು ಕೇಂದ್ರ ತಂಡದಲ್ಲಿದ್ದು, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಂಡವನ್ನು ಬರ ಮಾಡಿಕೊಂಡರು.
ಬಳಿಕ ಕೂಡಿಗೆಯ ಸೈನಿಕ ಶಾಲೆಯ ಸಭಾಂಗಣದಲ್ಲಿ ಕೇಂದ್ರ ತಂಡದ ಮುಖ್ಯಸ್ಥರು ಮಳೆ ಹಾನಿ ಬಗ್ಗೆ ಜಿಲ್ಲಾಧಿಕಾರಿ ಅವರಿಂದ ಮಾಹಿತಿ ಪಡೆದರು.
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮಳೆಯಿಂದ ಜನ-ಜಾನುವಾರು, ಬೆಳೆ, ಮನೆ ಹಾನಿ ಹಾಗೂ ಭೂಕುಸಿತ ಬಗ್ಗೆ ಪವರ್ ಪಾಯಿಂಟ್ ಮೂಲಕ ಮಾಹಿತಿ ನೀಡಿದರು.
ಬಳಿಕ ಕೇಂದ್ರ ತಂಡವು ಮಡಿಕೇರಿ ತಾಲೂಕಿನಲ್ಲಿ ಭೂ ಕುಸಿತ ಉಂಟಾದ ಕಡಗದಾಳು ಬಳಿಯ ಬೊಟ್ಲಪ್ಪ ಪೈಸಾರಿ, ತಲಕಾವೇರಿಯ ಗಜಗಿರಿ ಬೆಟ್ಟ, ಚೇರಂಗಾಲ ಬಳಿ ಕರಿಮೆಣಸು ತೋಟ ಹಾನಿ ವೀಕ್ಷಣೆ ನಡೆಸಿತು. ಇದರೊಂದಿಗೆ ಸೇತುವೆ ಹಾನಿ, ಭತ್ತ ಬೆಳೆ ಹಾನಿಯನ್ನೂ ವೀಕ್ಷಿಸಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಅಪರ ಜಿಲ್ಲಾಧಿಕಾರಿ ಡಾ. ಸ್ನೇಹಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಈ ಸಂದರ್ಭ ಹಾಜರಿದ್ದರು

- Advertisement -

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss

Sitemap