Wednesday, June 29, 2022

Latest Posts

ಮಹದಾಯಿ ಮತ್ತು ಕೃಷ್ಣಾ ನದಿ ನೀರು ಹಂಚಿಕೆ ವಿವಾದ: ಕೇಂದ್ರ ಸಚಿವರೊಂದಿಗೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಚರ್ಚೆ

ಬೆಂಗಳೂರು: ನೆರೆಯ ರಾಜ್ಯಗಳಾದ ತೆಲಂಗಾಣ ಮತ್ತು ಗೋವಾ ರಾಜ್ಯಗಳು ಮಹದಾಯಿ ಮತ್ತು ಕೃಷ್ಣಾ ನದಿ ನೀರು ಹಂಚಿಕೆ ಸಂಬಂಧ ಹೊಸ ವಿವಾದ ಸೃಷ್ಟಿಸಲು ಮುಂದಾಗಿದ್ದು, ಈ ವಿವಾದಗಳಿಂದ ರಾಜ್ಯಕ್ಕೆ ಅನ್ಯಾಯ ಆಗಲು ಬಿಡುವುದಿಲ್ಲ ಮತ್ತು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಸಮರ್ಥ ಮತ್ತು ನ್ಯಾಯಬದ್ಧ ವಾದವನ್ನು ಮಂಡಿಸಲಿದೆ ಎಂದು ರಾಜ್ಯದ ಜಲ ಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಭರವಸೆ ನೀಡಿದ್ದಾರೆ.

ಕೇಂದ್ರ ಜಲಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ನಂತರ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು, ಕೃಷ್ಣಾ ನದಿ ನೀರು ಹಂಚಿಕೆ ವಿಷಯದಲ್ಲಿ ತೆಲಂಗಾಣ ಸರ್ಕಾರವು ಹೊಸ ತಗಾದೆ ತೆಗೆದಿದೆ. ಕೃಷ್ಣಾ ನದಿ ನೀರು ಹಂಚಿಕೆಗೆ ಸಂಬಂಧಿಸಿದಂಯೆ ನ್ಯಾಯಾಧಿಕರಣವು ಈಗಾಗಲೇ ಅಂತಿಮ ತೀರ್ಪನ್ನೂ ಸಹಾ ನೀಡಿದೆ. 2013ರಲ್ಲಿಯೇ ಕರ್ನಾಟಕ, ಮಹಾರಾಷ್ಟ್ರ ಮತ್ತು ಅಖಂಡ ಆಂಧ್ರ ಪ್ರದೇಶ ರಾಜ್ಯಗಳಿಗೆ ನೀರು ಹಂಚಿಕೆ ಮಾಡಲಾಗಿದೆ. ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ನೀಡಿದ ಬಳಿಕ ಐತೀರ್ಪಿನ ಅಧಿಸೂಚನೆ ಹೊರಡಿಸಲು ಕೇಂದ್ರ ಸರ್ಕಾರವೂ ನಿರ್ಧರಿಸಿದೆ. ಹೀಗಾಗಿ ನೀರು ಹಂಚಿಕೆ ವಿಷಯದಲ್ಲಿ ಹೊಸದಾಗಿ ನ್ಯಾಯಾಧಿಕರಣ ಸ್ಥಾಪಿಸಬೇಕೆಂದು ತೆಲಂಗಾಣ ಸರ್ಕಾರದ ವಾದ ಅತಾರ್ತಿಕವಾಗಿದೆ ಎಂದು ಹೇಳಿರುವ ಸಚಿವರು, ರಾಜ್ಯದ ಹಿತಾಸಕ್ತಿ ಕಾಪಾಡಲು ತಾವು ಬದ್ಧ ಎಂದು ಪುನರುಚ್ಛರಿಸಿದ್ದಾರೆ.

ಕೇಂದ್ರ ಸಚಿವರೊಂದಿಗೆ ಸಮಾಲೋಚನೆ: ಕೃಷ್ಣಾ ನದಿ ನೀರು ಹಂಚಿಕೆ ಸಂಬಂಧ ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ನ್ಯಾಯಾಧಿಕರಣದಲ್ಲಿ ಮರು ವಿಚಾರಣೆ ನಡೆಸುವಂತೆ ಕೇಂದ್ರ ಜಲ ಶಕ್ತಿ ಸಚಿವರನ್ನು ಒತ್ತಾಯಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಜಲ ಸಂಪನ್ಮೂಲ ಸಚಿವ ಶ್ರೀ ರಮೇಶ್ ಜಾರಕಿಹೊಳಿ ಅವರು ಕೇಂದ್ರ ಜಲಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರೊಂದಿಗೆ ವಿಸ್ತೃತವಾಗಿ ದೂರವಾಣಿಯಲ್ಲಿ ಚರ್ಚಿಸಿ ವಿವರಣೆ ನೀಡಿದ್ದಾರೆ. 2013ರಲ್ಲಿಯೇ ಕೃಷ್ಣಾ ನದಿ ನೀರು ಹಂಚಿಕೆ ಬಗ್ಗೆ ನ್ಯಾಯಾಧಿಕರಣ ತೀರ್ಪು ನೀಡಿದೆ. ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ಪ್ರಕಟಿಸುವ ಸಮಯದಲ್ಲಿ ಸೀಮಾಂಧ್ರ ಮತ್ತು ತೆಲಂಗಾಣ ರಾಜ್ಯಗಳ ನಡುವಿನ ನೀರು ಹಂಚಿಕೆ ಸಮಸ್ಯೆಗೆ ಕರ್ನಾಟಕವನ್ನು ಹೊಣೆಯನ್ನಾಗಿಸಬಾರದೆಂದು ಕೇಂದ್ರ ಸಚಿವರನ್ನು ಒತ್ತಾಯಿಸಿದ್ದಾರೆ.

ಮಹದಾಯಿ ‌ಮತ್ತು ಕೃಷ್ಣಾ ನದಿ ನೀರು ಹಂಚಿಕೆ‌ ವಿಚಾರದಲ್ಲಿ ನೆರೆ ರಾಜ್ಯಗಳು ವಿವಾದ ಸೃಷ್ಟಿಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ  ಬಿ ಎಸ್ ಯಡಿಯೂರಪ್ಪ ಅವರೂ ಸಹಾ ಕೇಂದ್ರ ಜಲಶಕ್ತಿ ಸಚಿವರಿಗೆ ತುರ್ತು ಪತ್ರ ಬರೆದಿದ್ದು ಕೂಡಲೇ ರಾಜ್ಯದ ಪಾಲಿನ‌‌ ನೀರನ್ನು ಬಳಸಿಕೊಳ್ಳಲು ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss