Tuesday, July 5, 2022

Latest Posts

ಮಹದಾಯಿ, ಮೇಕೆದಾಟು ಯೋಜನೆಗಳನ್ನು ಆದಷ್ಟು ಬೇಗ ಕೈಗೆತ್ತಿಕೊಳ್ಳುತ್ತೇವೆ: ಮುಖ್ಯಮಂತ್ರಿ ಬೊಮ್ಮಾಯಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಹಾವೇರಿ

ಮಹದಾಯಿ ಮತ್ತು ಮೇಕೆದಾಟು ಯೋಜನೆಗಳನ್ನ ಆದಷ್ಟು ಬೇಗ ಕೈಗೆತ್ತಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಜಿಲ್ಲೆಯ ಹಿರೇಕೆರೂರ ತಾಲೂಕಿನ ಬಸರೀಹಳ್ಳಿ ಗ್ರಾಮದ ಹೆಲಿಪ್ಯಾಡದಲ್ಲಿ ಸುದ್ದೊಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ಈ ಯೋಜನೆಗಳಿಗೆ ಸಂಬಂಧಿಸಿದ ಸಚಿವರೊಂದಿಗೆ ಚರ್ಚಿಸಲಾಗುವುದು. ಕಾನೂನು ತಜ್ಞರೊಂದಿಗೆ ಚರ್ಚಿಸಿ ನೋಟೊಫಿಕೇಷನ್ ಹೊರಡಿಸುವುದಕ್ಕೆ ಸೂಚನೆ ನೀಡಿವದಾಗಿ ತಿಳಿಸಿದರು. ಕೃಷ್ಣಾ ಮೇಲ್ದಂಡೆ ಯೋಜನೆಗೆ ಬಂಧಿದಂತೆ ಮಾತನಾಡಿದ ಅವರು, ೫೨೪ ಮೀಟರ ಎತ್ತರಿಸುವುದಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಕಾನೂನು ತಜ್ಞರೊಂದಿಗೆ ಚರ್ಚಿಸಲಾಗುವುದು ನಂತರ ನೊಟಿಫಿಕೇಣನ್ ಹೊರಡಿಸಿವಿದಕ್ಕೆ ಸೂಚನೆ ನೀಡಿರುದಾಗಿ ತಿಳಿಸಿದರು.
ಹೊಸ ಶಿಕ್ಷಣ ನೀತಿಯನ್ನು ಅಕ್ಟೋಬರ್ ಒಂದರದ ಶಿಕ್ಷಣ ತಜ್ಞರೊಂದಿಗೆ ಚರ್ಚಿಸಿದ ನಂತರ ಅನುಷ್ಟಾನ ಗೊಳಿಸಲಾಗುವುದು ಎಂದರು.
ಹಿರೇಕೆರೂರು ಮತ್ತು ರಟ್ಟೀಹಳ್ಳಿ ತಾಲೂಕಿನಲ್ಲಿ ಕೆರೆ ತುಂಬಿಸೋ ಯೋಜನೆ, ಹಾವೇರಿಯಲ್ಲಿ ಮೆಗಾ ಡೈರಿ ಸೇರಿದಂತೆ ವಿವಿಧ ಕಾರ್ಯಗಳಿಗೆ ಚಾಲನೆ ನೀಡಲಾಗುವುದು ಎಂದರು.
ಹಾವೇರಿ ಜಿಲ್ಲೆಯ ಅಭಿವೃದ್ಧಿ ಪರ್ವ ಆರಂಭವಾಗಿದೆ. ಹಿರೇಕೆರೂರ ಹಾಗೂ ರಟ್ಟಿಹಳ್ಳಿ ತಾಲೂಕುಗಳ ಎರಡು ಕೆರೆ ತುಂಬಿಸುವ ಕಾರ್ಯ ಇಂದು ಮಾಡುತ್ತಿದ್ದೇವೆ. ಜಿಲ್ಲೆಯ ಹಲವು ತಾಲೂಕಿನಲ್ಲಿ ಕೆರೆ ತುಂಬಿಸುವ ಕಾರ್ಯಕ್ಕೂ ಚಾಲನೆ ನೀಡುತ್ತೇವೆ. ರಾಜ್ಯದ ಹಲವು ನೀರಾವರಿ ಯೋಜನೆಗಳನ್ನ ಪೂರ್ಣಗೊಳಿಸುವ ಕಾರ್ಯಕ್ಕೆ ಮುಂದಾಗಿದ್ದೇವೆ ಎಂದರು.
ಬಹುದಿನಗಳ ರೈತರ ಕನಸಿನ ಯೋಜನೆಗೆ ಮೆಗಾ ಡೈರಿಗೆ ಒತ್ತಾಯ ಮಾಡಿದ್ದೆವು ಅದು ದು ಸಾಕಾರವಾಗುತ್ತಿದೆ ಎಂದು ತಿಳಿಸಿದರು.
ಹಾನಗಲ್,ಬ್ಯಾಡಗಿ ಹಾಗೂ ಶಿಗ್ಗಾವಿ ತಾಲೂಕಿನಲ್ಲಿ ಕೆರೆ ತುಂಬಿಸುವ ಕೆಲಸ ಮುಗಿಯುವ ಹಂತದಲ್ಲಿ ಇವೆ.
ನೀರಾವರಿ ಯೋಜನೆಗಳಿಗೆ ನಿಮ್ಮಿಂದಾ ನೀರಿಕ್ಷೆ ಬಹಳ ಇದೆ ಎಂಬುವುದಕ್ಕೆ ಪ್ರತಿಕ್ರೀಯೆ. ಅಪ್ಪರ್ ಕೃಷ್ಣಾ,ಮಹದಾಯಿ, ಮೇಕೆದಾಟು ಯೋಜನೆ ಪ್ರಕ್ರಿಯೆಗಳನ್ನ ದೆಹಲಿಗೆ ಹೋಗಿ ಕಾನೂನು ತಜ್ಞರ ಜೊತೆ ಚರ್ಚಿಸಲಾಗುತ್ತೆ. ಆ ಯೋಜನೆಯನ್ನು ನೋಟಿಪಿಕೇಷನ್ ಮಾಡುವುದಕ್ಕೆ ತೀವ್ರಗತಿಯಲ್ಲಿ ಜಾರಿ ಮಾಡುತ್ತೇವೆ ಎಂದು ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss