ಪಾಟ್ನಾ: ಬಿಹಾರ ವಿಧಾನ ಸಭಾ ಚುನಾವಣೆಯಲ್ಲಿ ವೈತ್ರಿಕೂಟವೇ ಜಯಭೇರಿ ಸಾಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಚುನಾವಣಾ ವೇಳೆ ಮತಗಟ್ಟೆಗೆ ತೆರಳಿ ಮತದಾನ ಮಾಡಿ, ಮಾತನಾಡಿದ ಅವರು, ಬಿಹಾರದ ಜನತೆಗೆ ಬದಲಾವಣೆ ಬೇಕಾಗಿದೆ ಹಾಗಾಗಿ ಅವರು ಮೈತ್ರಿಕೂಟವನ್ನು ಗೆಲ್ಲಿಸಲಿದ್ದಾರೆ. ಈ ಬಾರಿ ಮೈತ್ರಿಕೂಟಕ್ಕೆ ಜಯ ಖಂಡಿತ. ರಾಜ್ಯದ ಜನರ ಅಭಿಪ್ರಾಯ ಏನು ಎಂಬುದು ನಮಗೆ ತಿಳಿದಿದೆ ಎಂದರು.
ತೇಜಸ್ವಿ ಯಾದವ್ ಮಾತನಾಡಿದ್ದು, ಬಿಹಾರದಲ್ಲಿ ಮತದಾರರು ತಮ್ಮ ಮತದಾನದ ಮೂಲಕ ತಮಗೆ ಬೇಕಿರುವ ಬದಲಾವಣೆಯನ್ನು ವ್ಯಕ್ತಪಡಿಸಲಿದ್ದಾರೆ. ರಾಜ್ಯದಲ್ಲಿ ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡಲಿದ್ದಾರೆ ಎಂದು ಹೇಳಿದರು.
ಎರಡನೇ ಹಂತದ ಚುನಾವಣೆಯಲ್ಲಿ 17 ಜಿಲ್ಲೆಗಳ 94 ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ನಡೆಯುತ್ತಿದೆ. 2.85 ಕೋಟಿ ಜನ ಮತದಾರರು ಈ ಬಾರಿ ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಚುನಾವಣೆಯ ಕಣದಲ್ಲಿ 1463 ಅಭ್ಯರ್ಥಿಗಳ ನಡುವೆ ಪೈಪೋಟಿ ನಡೆಯುತ್ತಿದೆ.