ಹೊಸದಿಗಂತ ಆನ್ ಲೈನ್ ಡೆಸ್ಕ್:
ಕೊರೋನಾ ಮಹಾಮಾರಿಯಿಂದ ಮಹಾತ್ಮಗಾಂಧಿಯವರ ಮರಿ ಮೊಮ್ಮಗ ಸತೀಶ್ ಧುಪೇಲಿಯಾ(66) ಮೃತಪಟ್ಟಿದ್ದಾರೆ.
ಕಳೆದ 1 ತಿಂಗಳಿಂದ ನಿಮೋನಿಯಾಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸತೀಶ್ ಅವರು ಚಿಕಿತ್ಸೆ ಫಲಿಸದೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಸತೀಶ್ ಅವರ ಸಹೋದರಿ ಉಮಾ ಧುಪೇಲಿಯಾ ತಿಳಿಸಿದ್ದಾರೆ.
ಹಲವು ವರ್ಷಗಳಿಂದ ಶ್ವಾಸಕೋಶ ಸಂಬಂಧಿತ ಕಾಯಿಲೆಗೆ ತುತ್ತಾಗಿದ್ದ ಸತೀಶ್ ಅವರಿಗೆ ಕಳೆದ ತಿಂಗಳು ಕೊರೋನಾ ಸೋಂಕು ದೃಢಪಟ್ಟಿದ್ದು, ಆರೋಗ್ಯ ದಿನೇ ದಿನೇ ಕ್ಷೀಣಿಸುತ್ತಿತ್ತು ಎಂದು ತಿಳಿಸಿದ್ದಾರೆ.