ಮಹಾಮಾರಿ ಕೊರೋನಾಗೆ 500ಕ್ಕೂ ಹೆಚ್ಚು ಬಲಿ: 2200ಕ್ಕೂ ಹೆಚ್ಚು ಮಂದಿ ಗುಣಮುಖ

0
51

ಹೊಸದಿಲ್ಲಿ: ದೇಶದಲ್ಲಿ ಮಹಾಮಾರಿ ಕೊರೋನಾಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 16ಸಾವಿರ ಗಡಿ ದಾಟಿದೆ ಎಂದು ವರದಿ ತಿಳಿಸಿದೆ. ದೇಶದಲ್ಲಿ ಕೊರೋನಾಗೆ 2300ಕ್ಕೂ ಅಧಿಕ ಮಂದಿ ಗುಣಮುಖರಾಗಿದ್ದು, 519 ಮಂದಿ ಬಲಿಯಾಗಿದ್ದಾರೆ.

ಮಹಾರಾಷ್ಟ್ರ ಜಿಲ್ಲೆಯಲ್ಲಿ ಇದೀಗ ಸೋಂಕಿತರ ಸಂಖ್ಯೆ 3600 ಗಡಿ ದಾಟಿದ್ದು, ದೇಶದಲ್ಲಿ ಅತೀ ಹೆಚ್ಚು ಕೊರೋನಾ ಸೋಂಕಿತರನ್ನು ಹೊಂದಿರುವ ರಾಜ್ಯ ವಾಗಿದ್ದು, ಸೋಂಕಿಗೆ 211ಕ್ಕೂ ಮಂದಿ ಬಲಿಯಾಗಿದ್ದಾರೆ.ದೆಹಲಿ ಎರಡನೇ ಸ್ಥಾನದಲ್ಲಿದ್ದು, ಸೋಂಕಿತರ ಸಂಖ್ಯೆ 1800ಕ್ಕೆ ಏರಿಕೆಯಾಗಿದ್ದು, ಮೃತಪಟ್ಟವರ ಸಂಖ್ಯೆ 43ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ.

ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 390ಕ್ಕೆ ಏರಿಕೆಯಾಗಿದ್ದು, 16 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕಿಗೆ 111 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here