spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮಹಾರಾಷ್ಟ್ರದಿಂದ ಆಗಮಿಸುತ್ತಿರುವ ಜನರಲ್ಲಿ ಅತೀ ಹೆಚ್ಚು ಸೋಂಕು: ಇ-ಪಾಸ್ ನೀಡಿಕೆ ತಾತ್ಕಾಲಿಕ ಸ್ಥಗಿತ

- Advertisement -Nitte

ಬೆಳಗಾವಿ: ಮಹಾರಾಷ್ಟ್ರದಿಂದ ಆಗಮಿಸುತ್ತಿರುವ ಜನರಲ್ಲಿ ಅತೀ ಹೆಚ್ಚು ಸೋಂಕು ಕಂಡುಬಂದಿದೆ. ಇದು ಇನ್ನೂ ಹೆಚ್ಚಳವಾಗುತ್ತಿದೆ. ಆದ್ದರಿಂದ ರಾಜ್ಯ ಪ್ರವೇಶಕ್ಕೆ ಇ-ಪಾಸ್ ನೀಡಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಮುಂಬರುವ ದಿನಗಳಲ್ಲಿ ಇ-ಪಾಸ್ ಇಲ್ಲದೇ ಬರುತ್ತಿರುವವರನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಸರ್ಕಾರದ ಮಾರ್ಗಸೂಚಿ ಪ್ರಕರ ಎಲ್ಲರನ್ನೂ ತಪಾಸಣೆ ನಡೆಸಿ ಅಗತ್ಯವಿದ್ದರೆ ಕ್ವಾರಂಟೈನ್ ಮಾಡಬೇಕು ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.
ಅವರು ಶನಿವಾರ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನ ಕುಗನೊಳ್ಳಿ ಬಳಿ ಇರುವ ಅಂತರ್ ರಾಜ್ಯ ಚೆಕ್ ಪೋಸ್ಟ್ ಗೆ ಭೇಟಿ ನೀಡಿದ ಬಳಿಕ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಕೋವಿಡ್-೧೯ ನಿಯಂತ್ರಣದಲ್ಲಿ ಗಡಿ ಭಾಗದ ಚೆಕ್ ಪೋಸ್ಟ್ ಪಾತ್ರ ಪ್ರಮುಖವಾಗಿದೆ. ಸೇವಾ ಸಿಂಧು ಮೂಲಕ ಇ-ಪಾಸ್ ಪಡೆದುಕೊಂಡು ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರ ಆರೋಗ್ಯ ತಪಾಸಣೆ ಮಾಡುವ ಮೂಲಕ ಅತ್ಯುತ್ತಮ ಕೆಲಸ ಮಾಡಲಾಗುತ್ತಿದೆ ಎಂದರು.
ಕಳೆದ ವಾರದಿಂದ ಇ-ಪಾಸ್ ನೀಡುವುದನ್ನು ಸ್ಥಗಿತಗೊಳಿಸಲಾಗಿದೆ. ಮುಂದೆ ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ಕಾರ್ಯನಿರ್ವಹಿಸಲಾಗುವುದು. ಜಿಲ್ಲಾಡಳಿತ, ಪೊಲೀಸ್ ಹಾಗೂ ಆರೋಗ್ಯ ಇಲಾಖೆ ಸೇರಿದಂತೆ ಎಲ್ಲರೂ ಹಗಲಿರುಳು ಉತ್ತಮ ಕೆಲಸ ಮೆಚ್ಚುಗೆ ವ್ಯಕ್ತಪಡಿಸಿದರು.
ಪೊಲೀಸ್, ಆರೋಗ್ಯ ಸೇರಿದಂತೆ ಕೊರೊನಾ ವಾರಿಯರ್ಸ್‌ ಗಳಿಗೂ ಸೋಂಕು ಕಂಡುಬರುತ್ತಿರುವುದರಿಂದ ಬಹಳ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕಿದೆ ಎಂದು ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಇ-ಪಾಸ್ ಪರಿಶೀಲನೆ ಹಾಗೂ ಆರೋಗ್ಯ ತಪಾಸಣೆ ಕೌಂಟರ್ ಬಗ್ಗೆ ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ವಿವರಿಸಿದರು.
ರಿಪೋರ್ಟಿಂಗ್ ಮಾದರಿಯನ್ನು ಆನ್ ಲೈನ್ ಮಾಡಿದರೆ ಸಾಕಷ್ಟು ಸಮಯ ಉಳಿತಾಯವಾಗುತ್ತದೆ. ಅದೇ ರೀತಿ ಇ-ಪಾಸ್ ವಿತರಿಸಿದ ಬಳಿಕ ಅದರ ಬಗ್ಗೆ ಚೆಕ್ ಪೋಸ್ಟ್ ಗೆ ಮಾಹಿತಿಯನ್ನು ನೀಡಿದರೆ ಪ್ರಯಾಣಿಕರ ತಪಾಸಣೆ ಸುಲಭವಾಗಲಿದೆ ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ್ ರೆಡ್ಡಿ ಸಚಿವರಿಗೆ ಮನವಿ ಮಾಡಿಕೊಂಡರು.
ಚೆಕ್ ಪೋಸ್ಟ್ ನಲ್ಲಿ ಕ್ವಾರಂಟೈನ್ ಮುದ್ರೆ, ದಿನಾಂಕ ಮುದ್ರೆ ಹಾಗೂ ಥರ್ಮಲ್ ಸ್ಕ್ಯಾನರ್ ವ್ಯವಸ್ಥೆಯ ಬಗ್ಗೆ ರವೀಂದ್ರ ಕರಲಿಂಗಣ್ಣವರ ಮಾಹಿತಿಯನ್ನು ನೀಡಿದರು.
ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ಬೆಳಗಾವಿ ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್, ಬೆಳಗಾವಿ ಮಹಾನಗರ ಪೊಲೀಸ್ ಆಯುಕ್ತ ಬಿ‌.ಎಸ್.ಲೋಕೇಶ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss