Thursday, July 7, 2022

Latest Posts

ಮಹಾರಾಷ್ಟ್ರದಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಬಂದಿದ್ದ ವಿದ್ಯಾರ್ಥಿಗೆ ಸೋಂಕು: ಹೆಚ್ಚಿದ ಆತಂಕ

ಯಾದಗಿರಿ: ಎಸ್.ಎಸ್.ಎಲ್.ಸಿ ಪರೀಕ್ಷೆಗಾಗಿ ನೆರೆಯ ಮಹಾರಾಷ್ಟ್ರದಿಂದ ಯಾದಗಿರಿಗೆ ಬಂದಿದ್ದ ವಿದ್ಯಾರ್ಥಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಹೀಗಾಗಿ ಈ ವಿದ್ಯಾರ್ಥಿಯೊಂದಿಗೆ ಪರೀಕ್ಷೆ ಬರೆದಿದ್ದ ಇತರೇ ವಿದ್ಯಾರ್ಥಿಗಳಲ್ಲಿ ಆತಂಕ ಮನೆಮಾಡಿದೆ.
ಸೋಂಕಿತ ವಿದ್ಯಾರ್ಥಿ ಮೂಲತಃ ಯಾದಗಿರಿ ಸಮೀಪದ ಯಡಳ್ಳಿ ಗ್ರಾಮದವನಾಗಿದ್ದಾನೆ. ಕಳೆದ ಎರಡು ತಿಂಗಳಿಂದ ಲಾಕ್ ಡೌನ್ ಇದ್ದ ಕಾರಣ ವಿದ್ಯಾರ್ಥಿ ಮಹಾರಾಷ್ಟ್ರದ ಪುಣೆಯಲ್ಲಿ ಸಿಲುಕಿದ್ದ. ಎಸ್‌ಎಸ್‌ಎಲ್ ಸಿ ಪರೀಕ್ಷೆಗಾಗಿ ಈತ ಜೂನ್ 22ರಂದು ರಾಜ್ಯಕ್ಕೆ ಮರಳಿದ್ದ. ಅಂತರರಾಜ್ಯ ಪ್ರಯಾಣದ ಹಿನ್ನೆಲೆ ಜಿಲ್ಲಾಡಳಿತ ವಿದ್ಯಾರ್ಥಿಯನ್ನು ವಡಗೇರಾದ ಕ್ವಾರೆಂಟೈನ್ ಕೇಂದ್ರದಲ್ಲಿ ಇರಿಸಿತ್ತು. ಈ ವೇಳೆ ವಿದ್ಯಾರ್ಥಿಯ ರಕ್ತದ ಮಾದರಿ ಹಾಗೂ ಗಂಟಲು ದ್ರವದ ಸ್ಯಾಂಪಲ್ ಸಂಗ್ರಹ ಮಾಡಲಾಗಿತ್ತು. ಇಂದು ವರದಿ ಬಂದಿದ್ದು ಆತನಲ್ಲಿ ಕೊರೋನಾ ಪಾಸಿಟಿವ್ ಬಂದಿದೆ. ಸೋಂಕಿತ ವಿದ್ಯಾರ್ಥಿಯನ್ನು ಜಿಲ್ಲೆಯ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss