Tuesday, June 28, 2022

Latest Posts

ಮಹಾರಾಷ್ಟ್ರ ಆಗುತ್ತಾ ಮತ್ತೆ ಲಾಕ್: ಉಪ ಮುಖ್ಯಮಂತ್ರಿ ಅಜಿತ್‌ ಪವಾರ್ ಹೇಳಿದ್ದೇನು?

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿನ ಎರಡನೇ ಅಲೆ ಶುರುವಾದ ಲಕ್ಷಣಗಳು ಗೋಚರಿಸುತ್ತಿವೆ. ಕಳೆದ ವಾರಗಳಲ್ಲಿ ಭಾರಿ ಪ್ರಮಾಣದಲ್ಲಿ ತಗ್ಗಿದ್ದ ಕೋರೋಣ ಪ್ರಮಾಣ ಇದೀಗ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಹೆಚ್ಚು ಜನಸಂದಣಿ ಪ್ರದೇಶಗಳಲ್ಲಿ ಮತ್ತೆ ಲಾಕ್‌ಡೌನ್‌ ಜಾರಿಗೊಳಿಸುವ ಕುರಿತು ಉಪ ಮುಖ್ಯಮಂತ್ರಿ ಅಜಿತ್‌ ಪವಾರ್‌ ಮುನ್ಸೂಚನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೀಪಾವಳಿ ಹಬ್ಬದ ಸಮಯದಲ್ಲಿ ಅತಿ ಹೆಚ್ಚು ಜನ ಗುಂಪು ಸೇರಿದ್ದಾರೆ. ಗಣೇಶ ಚತುರ್ಥಿಯ ಸಮಯದಲ್ಲಿಯೂ ಇದೇ ರೀತಿಯಲ್ಲಿ ಆಗಿತ್ತು. ಈ ಕುರಿತು ಸಂಬಂಧಿತ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇವೆ. ಮುಂದಿನ 8-10 ದಿನಗಳವರೆಗೆ ಪರಿಸ್ಥಿತಿಯನ್ನು ಪರಿಶೀಲಿಸುತ್ತೇವೆ. ಬಳಿಕ ಲಾಕ್‌ಡೌನ್‌ ಬಗ್ಗೆ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಎರಡನೇ ಹಂತದ ಲಾಕ್​ಡೌನ್​ ಬಗ್ಗೆ ಈವರೆಗೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಅವರು ಸ್ಪಷ್ಟೀಕರಣ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ಈವರೆಗೆ 17.5 ಲಕ್ಷಕ್ಕೂ ಅಧಿಕ ಪ್ರಕರಣ ಪತ್ತೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss