Thursday, July 7, 2022

Latest Posts

ಮಹಾರಾಷ್ಟ್ರ, ಉತ್ತರ ಪ್ರದೇಶದಲ್ಲಿ ಮತ್ತೆರಡು ‘ಕೊರೋನಾ ಸೋಂಕಿತ’ ಪ್ರಕರಣ ಪತ್ತೆ

ಹೊಸದಿಲ್ಲಿ: ಮಹಾರಾಷ್ಟ್ರ ಹಾಗೂ ಉತ್ತರ ಪ್ರದೇಶದಲ್ಲಿ ತಲಾ ಒಂದೊಂದರಂತೆ ಮತ್ತೆರಡು ಕೊರೋನಾ ಪ್ರಕರಣ ಪತ್ತೆಯಾಗಿದ್ದು, ಭಾರತದಲ್ಲಿ ವೈರಸ್ ವ್ಯಾಪಿಸುತ್ತಿರುವುದು ಸ್ಪಷ್ಟವಾಗಿದೆ.

ಭಾನುವಾರ ಉತ್ತರಖಂಡದಲ್ಲಿ ಮೊದಲ ಕೊರೊನಾ ವೈರಸ್ ವರದಿಯಾಗಿತ್ತು. ಇದುವರೆಗೆ ದೆಹಲಿಯಲ್ಲಿ ಏಳು ಹಾಗೂ ಉತ್ತರ ಪ್ರದೇಶದಲ್ಲಿ 12 ಪ್ರಕರಣಗಳು ಪತ್ತೆಯಾಗಿವೆ. ಕರ್ನಾಟಕದಲ್ಲಿ 7, ಮಹಾರಾಷ್ಟ್ರ 32, ಲಡಾಖ್‌ನಲ್ಲಿ ಮೂರು ಹಾಗೂ ಜಮ್ಮು-ಕಾಶ್ಮೀರ ಇಬ್ಬರು ವ್ಯಕ್ತಿಗಳಲ್ಲಿ ಕೊರೊನಾ ಸೋಂಕು ಇದೆ ಎಂದು ತಿಳಿದುಬಂದಿದೆ. ತೆಲಂಗಾಣದಲ್ಲಿ 3, ರಾಜಸ್ಥಾನದಲ್ಲಿ ಎರಡು, ಕೇರಳದಲ್ಲಿ 22 ಪ್ರಕರಣಗಳು ವರದಿಯಾಗಿವೆ. ಆಂಧ್ರಪ್ರದೇಶ, ಪಂಜಾಬ್ ಹಾಗೂ ತಮಿಳುನಾಡಿನಲ್ಲಿ ತಲಾ ಒಂದು ಪ್ರಕರಣ ಬೆಳಕಿಗೆ ಬಂದಿವೆ.

ಕೊರೊನಾ ವೈರಸ್ ಪ್ರಕರಣಗಳು ದೇಶಾದ್ಯಂತ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆ ಕೇಂದ್ರ ಸರ್ಕಾರವು ಮಾರಣಾಂತಿಕ ವೈರಸ್ ಅನ್ನು ಅಧಿಸೂಚಿತ ವಿಪತ್ತು ಎಂದು ಘೋಷಿಸಿ ಶನಿವಾರ ಆದೇಶ ಹೊರಡಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss