Thursday, June 30, 2022

Latest Posts

ಮಹಾರಾಷ್ಟ್ರ ಪೋಲೀಸರ ನೆರವಿಗೆ ನಿಂತ ಸೋನು ಸೂದ್

ಮುಂಬೈ: ದೇಶಾದ್ಯಂತ ಕೊರೋನಾ ವೈರಸ್ ಲಾಕ್ ಡೌನ್ ಸಂದರ್ಭದಲ್ಲಿ ವಲಸೆ ಕಾರ್ಮಿಕರು ತಮ್ಮ ಮನೆಗೆ ತಲುಪಲು ಸಹಾಯ ಮಾಡಿದ್ದ ಬಾಲಿವುಡ್ ನಟ ಸೋನು ಸೂದ್ ಇದೀಗ ಮಹಾರಾಷ್ಟ್ರ ಪೊಲೀಸರಿಗೆ ನೆರವಿಗೆ ನಿಂತಿದ್ದಾರೆ.ಲಾಕ್ ಡೌನ್ ಸಂದರ್ಭದಲ್ಲಿ ವಲಸೆ ಕಾರ್ಮಿಕರರಿಗೆ ಆಹಾರ ಮತ್ತು ತವರಿಗೆ ಮರಳಲು ನೆರವು ನೀಡಿದ್ದ ನಟ ಸೋನು ಸೂದ್ ಇದೀಗ ಮಹಾರಾಷ್ಟ್ರದಲ್ಲಿ ಪೊಲೀಸರಿಗೆ 25 ಸಾವಿರ ಫೇಸ್ ಶೀಲ್ಡ್ ಖರೀದಿಸಿ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.ಈ ಕುರಿತು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರು ಟ್ವೀಟ್ ಮಾಡಿದ್ದು, ಪೊಲೀಸ್ ಸಿಬ್ಬಂದಿಗಳಿಗೆ 25 ಸಾವಿರ ಫೇಸ್ ಶೀಲ್ಡ್ ನೀಡುವ ಮೂಲಕ ಕರ್ತವ್ಯ ಮೆರೆದಿದ್ದಾರೆ. ಅವರಿಗೆ ನಮ್ಮ ಧನ್ಯವಾದ ಎಂದು ಹೇಳಿದ್ದಾರೆ.ಮಹಾರಾಷ್ಟ್ರದಲ್ಲಿ ಇದುವರೆಗೆ ಸುಮಾರು 6,400 ಮಂದಿ ಪೊಲೀಸ್ ಸಿಬ್ಬಂದಿ ಸೋಂಕಿಗೆ ತುತ್ತಾಗಿದ್ದು, ಈ ಪೈಕಿ 5,100 ಮಂದಿ ಪೊಲೀಸರು ಗುಣಮುಖರಾಗಿದ್ದಾರೆ. 1,213 ಸಕ್ರಿಯ ಪ್ರಕರಣಗಳಿವೆ. 48 ಮಂದಿ ಪೊಲೀಸರು ಕೊರೋನಾಗೆ ಬಲಿಯಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss