ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಮುಂದಿನ ಮುಖ್ಯಸ್ಥರಾಗಿ ಆಯ್ಕೆಯಾಗಿರುವ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ನಾನಾ ಪಟೋಲೆ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ವಿಧಾನ ಸೌಧ ಮೂಲಗಳು ಮಾಹಿತಿ ನೀಡಿದ್ದು, ಪಟೋಲೆ ಅವರು ತಮ್ಮ ರಾಜೀನಾಮೆಯನ್ನು ಉಪ ಸ್ಪೀಕರ್ ನರಹರಿ ಝಿರ್ವಾಲ್ ಅವರಿಗೆ ಹಸ್ತಾಂತರಿಸಿದ್ದಾರೆ ಎಂದು ತಿಳಿಸಿದೆ.
ಭಂಡಾರ ಜಿಲ್ಲೆಯ ಸಕೋಲಿ ಕ್ಷೇತ್ರದ ಶಾಸಕರಾಗಿರುವ ಪಟೋಲೆ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವ ಸಾಧ್ಯತೆ ಇದೆ.