ಹೊಸದಿಗಂತ ವರದಿ ವಿಜಯಪುರ:
ಬೆಳಗಾವಿ ನಮ್ಮದೆಂದು ಹೇಳಿಕೆ ನೀಡಿದ್ದ ಮಹಾರಾಷ್ಟ್ರ ಸಿಎಂ ಉದ್ಧವ ಠಾಕ್ರೆ ಹೇಳಿಕೆ ಖಂಡಿಸಿ ನಗರದ ಸಿದ್ಧೇಶ್ವರ ದೇವಸ್ಥಾನದ ಎದುರು ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.
ಮಹಾರಾಷ್ಟ್ರ ಸಿಎಂ ಉದ್ಧವ ಠಾಕ್ರೆ ವಿರುದ್ಧ ಘೋಷಣೆ ಕೂಗಿ, ಅವರ ಭಾವಚಿತ್ರ ದಹಿಸಿ ಆಕ್ರೋಶ ಹೊರ ಹಾಕಿದರು.
ಈ ಸಂದರ್ಭ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಶಕ್ತಿಕುಮಾರ ಉಕುಮನಾಳ, ತುಕಾರಾಮ ಪೂಜಾರಿ, ಮಂಜುಳಾ ಜಾಧವ, ಪ್ರೇಮಾ ಚಲವಾದಿ ಇತರರು ಇದ್ದರು.