Wednesday, August 17, 2022

Latest Posts

‘ಮಹಾ’ ಸಿಎಂ ಆಗಿ ದೇವೇಂದ್ರ ಫಡ್ನವೀಸ್: ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

‘ಮಹಾ’ ಸಿಎಂ ಆಗಿ ದೇವೇಂದ್ರ ಫಡ್ನವೀಸ್ ಇಂದು ಸಂಜೆ 7 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಇದಲ್ಲದೆ, ಶಿವಸೇನೆ ಬಂಡಾಯಗಾರ ಏಕನಾಥ್ ಶಿಂಧೆ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.   ಇಂದು ರಾತ್ರಿ ಕೇವಲ 2 ಜನರು ಮಾತ್ರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಿವೆ.
ಮಹಾರಾಷ್ಟ್ರದ ಅಘಾಡಿ ಸರ್ಕಾರಕ್ಕೆ ವಿಶ್ವಾಸಮತಯಾಚನೆ ಮುನ್ನವೇ ಪತನವಾಗಿದ್ದು, ನನ್ನೆ ರಾತ್ರಿ ಫೇಸ್​​ಬುಕ್​ ಲೈವ್‌ಗೆ ಬಂದ ಉದ್ಧವ್ ಠಾಕ್ರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಪ್ರಕಟಿಸಿದ್ದರು. ಇದೀಗ, ಹೊಸ ಸರ್ಕಾರ ರಚನೆಗೆ ಬಿಜೆಪಿ ಸಕಲ ರೀತಿಯಲ್ಲೂ ತಯಾರಿ ನಡೆಸುತ್ತಿದೆ. ದೇವೇಂದ್ರ ಫಡ್ನವೀಸ್​​ ಮತ್ತೊಮ್ಮೆ ಸಿಎಂ ಸ್ಥಾನಕ್ಕೇರುವುದು ಬಹುತೇಕ ಖಚಿತವಾಗಿದೆ.
ರಾಜ್ಯದಲ್ಲಿ ಅತಿದೊಡ್ಡ ರಾಜಕೀಯ ಪಕ್ಷವಾಗಿರುವ ಭಾರತೀಯ ಜನತಾ ಪಾರ್ಟಿ(ಬಿಜೆಪಿ)ಗೆ ಶಿವಸೇನೆಯ ಬಂಡಾಯ ಶಾಸಕರು ಸಾಥ್​ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!