Thursday, August 11, 2022

Latest Posts

ಮಹಿಳಾ ಐಪಿಎಲ್ ಆಯೋಜನೆಗೆ ಬಿಸಿಸಿಐ ಸಿದ್ಧ: ಸೌರವ್​ ಗಂಗೂಲಿ

ನವದೆಹಲಿ: ಮಹಿಳಾ ಐಪಿಎಲ್ ಅಥವಾ ಅದೇ ರೀತಿಯ ಚಾಲೆಂಜರ್ ಟೂರ್ನಿ ಆಯೋಜನೆಗೆ ಬಿಸಿಸಿಐ ಸಿದ್ಧವಾಗಿದೆ. ಈ ಬಗ್ಗೆ ಯಾವುದೇ ರೀತಿಯ ಅನುಮಾನ ಬೇಡ ಎಂದು ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ ಹೇಳಿದ್ದಾರೆ.
ಶೀಘ್ರದಲ್ಲೇ ಮಹಿಳಾ ಐಪಿಎಲ್ ಟೂರ್ನಿಯ ಕುರಿತು ವೇಳಾಪಟ್ಟಿ ಯೋಜಿಸುತ್ತೇವೆ ಎಂದು ಐಪಿಎಲ್ ಆಡಳಿತ ಮಂಡಳಿ ಸಭೆಯಲ್ಲಿ ಗಂಗೂಲಿ ಹೇಳಿದ್ದಾರೆ.
ಮಹಿಳಾ ಐಪಿಎಲ್ ಟೂರ್ನಿಯನ್ನು ನವೆಂಬರ್ 1-10 ಅವಧಿಯಲ್ಲಿ ಆಯೋಜಿಸುವ ಕುರಿತು ಬಿಸಿಸಿಐ ಚಿಂತನೆ ನಡೆಸಿದೆ ಎನ್ನಲಾಗಿದೆ. ಕೊರೋನಾ ಸಾಂಕ್ರಾಮಿಕದಿಂದಾಗಿ ಮನೆಯಲ್ಲಿರುವ ಆಟಗಾರ್ತಿಯರಿಗೆ ತರಬೇತಿ ಕ್ಯಾಂಪ್ ಆಯೋಜಿಸುವ ಕುರಿತೂ ಕೂಡ ಸೌರವ್ ಗಂಗೂಲಿ ನಿರ್ಧರಿಸಿದ್ದಾರೆ.ರಾಷ್ಟ್ರೀಯ ಮಹಿಳಾ ಕ್ರಿಕೆಟ್​ ತಂಡಕ್ಕೂ ನಾವು ವಿವಿಧ ಯೋಜನೆಗಳನ್ನು ಹೊಂದಿದ್ದೇವೆ’ ಎಂದು ಗಂಗೂಲಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss