Saturday, March 25, 2023

Latest Posts

ಮಹಿಳಾ ಸಬಲೀಕರಣಕ್ಕಾಗಿ ನಮ್ಮ ಸರ್ಕಾರ ಬದ್ಧ: ಮಹಿಳಾ ದಿನದಂದು ನಾರಿಶಕ್ತಿಯನ್ನು ಕೊಂಡಾಡಿದ ಪ್ರಧಾನಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಮಹಿಳೆಯರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.

ಮಹಿಳೆಯರ ಹಲವಾರು ಸಾಧನೆಗಳ ಬಗ್ಗೆ ಭಾರತವು ಹೆಮ್ಮೆಪಡುತ್ತದೆ ಮತ್ತು ವಿವಿಧ ಕ್ಷೇತ್ರಗಳಲ್ಲಿ ಮಹಿಳಾ ಸಬಲೀಕರಣಗೊಳಿಸಲು ನಮ್ಮ ಸರ್ಕಾರವು ಶ್ರಮೀಸುತ್ತಿದೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿಯವರ ಟ್ವಿಟ್ಟರ್‌ ಖಾತೆಯಲ್ಲಿ, “ಅಂತಾರಾಷ್ಟ್ರೀಯ ಮಹಿಳಾ ದಿನದಂದು, ನಮ್ಮ ನಾರಿ ಶಕ್ತಿಯ ಸಾಧನೆಗಳಿಗೆ ಗೌರವ. ಭಾರತದ ಪ್ರಗತಿಯಲ್ಲಿ ಮಹಿಳೆಯರ ಪಾತ್ರವನ್ನು ನಾವು ಬಹಳವಾಗಿ ಗೌರವಿಸುತ್ತೇವೆ. ನಮ್ಮ ಸರ್ಕಾರವು ಮಹಿಳಾ ಸಬಲೀಕರಣಕ್ಕಾಗಿ ಕೆಲಸ ಮಾಡುತ್ತಲೇ ಇರುತ್ತದೆ” ಎಂದು ಟ್ವೀಟ್‌ ಮಾಡಿದ್ದಾರೆ.

ಪ್ರತಿ ವರ್ಷ ಮಾರ್ಚ್ 8 ರಂದು ಮಹಿಳೆಯರ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಸಾಧನೆಗಳನ್ನು ಆಚರಿಸಲು ಅಂತರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಗುತ್ತದೆ. ಸಮಾಜವು ಒಡ್ಡಿದ ವಿವಿಧ ಸವಾಲುಗಳ ನಡುವೆಯೂ ಪ್ರಪಂಚದಾದ್ಯಂತ ಎಲ್ಲಾ ಕ್ಷೇತ್ರಗಳಲ್ಲಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ ಮಹಿಳೆಯರನ್ನು ಈ ದಿನ ಸ್ಮರಿಸುತ್ತದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!