ಮಂಗಳೂರು: ನಗರದ ಬೋಳೂರಿನ ಮಹಿಳೆಯೊಬ್ಬರಲ್ಲಿ ಕೊರೋನಾ ಸೋಂಕು ಕಂಡು ಬಂದಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಡಿದ್ದು ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಆ ಮಹಿಳೆಯನ್ನು ಮಂಗಳವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಬುಧವಾರ ಅವರಿಗೆ ಕೊರೋನಾ ಇರುವ ಸುದ್ದಿ ಹರಡಿದ್ದು, ಸ್ಥಳೀಯರಲ್ಲಿ ಭೀತಿ ಹುಟ್ಟಿಸಿದೆ. ಈ ಪ್ರಕರಣದ ಹಿನ್ನೆಲೆಯಲ್ಲಿ ಬೋಳೂರಿನ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಪೊಲೀಸರು ಅಲ್ಲಲ್ಲಿ ಬ್ಯಾರಿಕೇಡ್ ಅಳವಡಿಸಿದ್ದು, ಜನತೆ ಓಡಾಡದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ.