Wednesday, July 6, 2022

Latest Posts

ಮಹಿಳೆಯರೇ ಮುಂಬರುವ ಗ್ರಾ.ಪಂ. ಚುನಾವಣೆಯಲ್ಲಿ ಸಕ್ರಿಯರಾಗಿ: ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷ ಸುಧಾ ಮಲ್ಲಣ್ಣ

ಚಾಮರಾಜನಗರ:  ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿಯ ಸಕ್ರಿಯ ಮಹಿಳಾ ಕಾರ್ಯಕರ್ತರು ಸ್ಪರ್ಧೆ ಮಾಡಿ, ಜಯಗಳಿಸುವ ಮೂಲಕ ಸಾರ್ವಜನಿಕರ ಸೇವೆಯಲ್ಲಿ ತೊಡಗಿಸಿ ಬಿಜೆಪಿ ಸಂಘಟನೆಯಲ್ಲಿ ಮುಂದಾಗಬೇಕು ಎಂದು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷ ಸುಧಾ ಮಲ್ಲಣ್ಣ ತಿಳಿಸಿದರು.
ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಪ್ರಥಮ ಕಾರ್ಯಕಾರಣಿ ಹಾಗೂ ಸಿಸ್ಟರ್‍ನಿವೇದಿತಾ ಅವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮಹಿಳೆಯರಿಗೆ ಶೇಕಡ 50 ರಷ್ಟು ಮೀಸಲಾತಿಯನ್ನು ನೀಡಿದೆ. ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಮಹಿಳೆಯ ಪಾತ್ರ ಬಹಳ ಮುಖ್ಯವಾಗಿರುತ್ತದೆ. ಬಿಜೆಪಿ ವಿವಿಧ ಮೋರ್ಚಾಗಳಲ್ಲಿ ಪದಾಧಿಕಾರಿಗಳು ಹಾಗು ಸಕ್ರಿಯ ಬಿಜೆಪಿ ಕಾರ್ಯಕರ್ತರು ಗ್ರಾ.ಪಂ. ಚುನಾವಣೆಯಲ್ಲಿ ಸ್ಪರ್ಧೆ ಮಾಡಿ, ಗೆಲುವು ಸಾಧಿಸಬೇಕು. ಆ ಮೂಲಕ Uಗ್ರಾಮ ಪಂಚಾಯಿತಿ ಅಧಿಕಾರವನ್ನು ಹಿಡಿಯಬೇಕು ಎಂದರು.
ಜಿಲ್ಲೆಯಲ್ಲಿ ಮಹಿಳೆಯರನ್ನು ಹೆಚ್ಚು ಸಂಘಟನೆ ಮಾಡಲು ಪದಾಧಿಕಾರಿಗಳು ಶ್ರಮಿಸಬೇಕು. ವಿವಿಧ ಮೋರ್ಚಾಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡು ಪಕ್ಷದ ಸಲಹೆ ಸೂಚನೆಗಳನ್ನು ಪಾಲನೆ ಮಾಡಿ, ಮುಂಬರುವ ದಿನಗಳಲ್ಲಿ ಮಹಿಳೆಯರು ಪಕ್ಷದ ಮುಂಚೂಣಿಯಲ್ಲಿರಬೇಕು. ತಾ.ಪಂ. ಜಿ.ಪಂ. ಚುನಾವಣೆಗೆ ಪಕ್ಷದಲ್ಲಿ ಸಕ್ರಿಯರಾಗಿ ದುಡಿಯುವವರಿಗೆ ಅವಕಾಶ ಕಲ್ಪಿಸಬೇಕೆಂಬ ಒತ್ತಾಯ ಮಹಿಳಾ ಮೋರ್ಚಾದಿಮದ ಪ್ರಬಲವಾಗಿ ರಾಜ್ಯ ಹಾಗೂ ರಾಷ್ಟ್ರೀಯ ವರಿಷ್ಠರಿಗೆ ತಲುಪುವ ಮಾದರಿಯಲ್ಲಿ ತಾವುಗಳು ಹಳ್ಳಿ ಹಳ್ಳಿಗಳಲ್ಲಿ ಪಕ್ಷ ಸಂಘಟನೆಯಲ್ಲಿ ಮುಂದಾಗಬೇಕು ಎಂದು ಸುಧಾಮಲ್ಲಣ್ಣ ತಿಳಿಸಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗಶ್ರೀಪ್ರತಾಪ್ ಸಿಸ್ಟರ್‍ನಿವೇದಿತಾ ಕುರಿತು ಮಾತನಾಡಿ, ಸಿಸ್ಟರ್ ನಿವೇದಿತಾ ಅವರು ಲಂಡನ್‍ನಲ್ಲಿ ಹುಟ್ಟಿದರು ಸಹ ಸ್ವಾಮಿ ವಿವೇಕಾನಂದರ ಭಾಷಣ ಮತ್ತು ವ್ಯಕ್ತಿತ್ವಕ್ಕೆ ಪ್ರಭಾವಿತರಾಗಿ ಹಿಂದು ಧರ್ಮವನ್ನು ಸ್ವೀಕಾರ ಮಾಡಿ, ಸಮಾಜ ಸೇವೆಯಲ್ಲಿ ತಮ್ಮನ್ನು ಸಮರ್ಪಣೆ ಮಾಡಿಕೊಂಡ ದಿಟ್ಟ ಮಹಿಳೆಯಾಗಿದ್ದಾರೆ ಎಂದು ಬಣ್ಣಿಸಿದರು.
ಜಿಲ್ಲಾ ಪ್ರಭಾರಿ ಮಂಗಳಮ್ಮ ಮಾತನಾಡಿ, ಮಹಿಳಾ ಮೋರ್ಚಾ ಇತರೇ ಮೋರ್ಚಾಗಳಿಂತ ಹೆಚ್ಚಿನ ರೀತಿಯಲ್ಲಿ ಸಂಘಟನೆಯಾಗಬೇಕು. ರಾಜ್ಯ ಪದಾದಿಕಾರಿಗಳ ಸೂಚನೆಗಳನ್ನು ಪಾಲನೆ ಮಾಡುವ ಜೊತೆಗೆ ನಿಗಧಿತ ಅವಧಿಯಲ್ಲಿ ಪದಾಧಿಕಾರಿಗಲ ಸಭೆಯನ್ನು ನಡೆಸಿ, ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು. ಕೋರಾನ್ ವಿರುದ್ದ ಹೋರಾಟ ಮಾಡುವ ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿ, ಸಭೆಗಳಲ್ಲಿ ಭಾಗವಹಿಸಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಗಲ ಶಿವಕುಮಾರ್, ಮಹಿಳಾ ಮೋರ್ಚಾ ಪ್ರಭಾರಿಗಳಾದ ಮಂಗಳಮ್ಮ, ಸರಸ್ವತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕಮಲಮ್ಮ, ಲಕ್ಷ್ಮಿ ಜಯಶಂಕರ್, ಹಾಗೂ ವಿವಿಧ ಮಂಡಲಗಳ ಅಧ್ಯಕ್ಷರು ಹಾಗು ಪದಾಧಿಕಾರಿಗಳು ಭಾಗವಹಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss