Sunday, June 26, 2022

Latest Posts

ಮಾಜಿ ಕ್ರಿಕೆಟ್ ಆಟಗಾರ ಯುವರಾಜ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲು

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಜಾತಿನಿಂದನೆ ಮಾಡಿದ ಆರೋಪದಡಿ ಟೀಂ ಇಂಡಿಯಾ ಮಾಜಿ ಕ್ರಿಕೆಟ್ ಆಟಗಾರ ಯುವರಾಜ್ ಸಿಂಗ್ ವಿರುದ್ಧ ಹರ್ಯಾಣ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.

ದಲಿತರನ್ನು ನಿಂದನೆ ಮಾಡಿದ್ದಾರೆ ಎಂದು ವಕೀಲರೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಕ್ರಿಕೆಟಿಗ ಯುವರಾಜ್ ಸಿಂಗ್ ವಿರುದ್ಧ ಹಿಸಾರ್ ನ ಹನ್ಸಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153, 153ಎ, 295, 505 ಮತ್ತು ಎಸ್ ಎಸ್ ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಲಾಕ್ ಡೌನ್ ಸಮಯದಲ್ಲಿ ರೋಹಿತ್ ಶರ್ಮಾ ಜೊತೆ ಇನ್ಸ್ಟಾಗ್ರಾಮ್ ಲೈವ್ ನಲ್ಲಿ ಮಾತನಾಡುವ ವೇಳೆ ಯುವರಾಜ್ ಸಿಂಗ್ ಜಾತಿ ನಿಂದನೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಆದರೆ ಘಟನೆಯ ಬಳಿಕ ಯುವರಾಜ್ ಕ್ಷಮೆ ಕೇಳಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss