Monday, August 8, 2022

Latest Posts

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆಸ್ಪತ್ರೆಯಿಂದ ಬಿಡುಗಡೆ

ಹೊಸದಿಲ್ಲಿ: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ.

ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ದಾಖಲಾಗಿದ್ದ ಸಿಂಗ್ ಅವರ ಆರೋಗ್ಯದಲ್ಲಿ ಚೇತರಿಕೆ ಕೊಂಡಿದ್ದು, ಮಂಗಳವಾರ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

87 ವರ್ಷದ ಡಾ. ಸಿಂಗ್ ಅವರು ಜ್ವರದಿಂದ ಬಳಲುತ್ತಿದ್ದು, ಅವರ ಗಂಟಲ ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದ್ದು, ಕೊರೋನಾ ಸೋಂಕು ತಗುಲಿಲ್ಲ ಎಂದು ಪರೀಕ್ಷಾ ವರದಿ ತಿಳಿಸಿದೆ.

ವಿರೋಧ ಪಕ್ಷದ ಕಾಂಗ್ರೆಸ್ನ ಹಿರಿಯ ರಾಜಕಾರಣಿ ಹಾಗೂ ಈಗ ರಾಜಸ್ಥಾನದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಇವರು 2004ರಿಂದ 2014ರವರೆಗು ಪ್ರಧಾನಿಯಾಗಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss