Friday, July 1, 2022

Latest Posts

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ: ಪುತ್ರ ಅಭಿಜಿತ್ ಮುಖರ್ಜಿ ಟ್ವೀಟ್

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬಂದಿದೆ ಎಂದು ಪ್ರಣಬ್ ಪುತ್ರ ಅಭಿಜಿತ್ ಮುಖರ್ಜಿ ಮಾಹಿತಿ ನೀಡಿದ್ದಾರೆ.
ದೆಹಲಿಯ ಸೇನಾ ರೆಫರಲ್‌ ಆಸ್ಪತ್ರೆಯಲ್ಲಿ ಪ್ರಣಬ್ ಮುಖರ್ಜಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಣಬ್ ಅವರ ಆರೋಗ್ಯದಲ್ಲಿ ಪ್ರಸ್ತುತ ಚೇತರಿಕೆ ಕಂಡುಬಂದಿದೆ ಎಂದು ಪುತ್ರ ಅಭಿಜಿತ್ ಮುಖರ್ಜಿ ಟ್ವೀಟ್ ಮಾಡಿದ್ದಾರೆ.
ಅಭಿಜಿತ್ ಮುಖರ್ಜಿ ಅವರು, ದೇವರ ದಯೆ ಮತ್ತು ನಿಮ್ಮ ಹಾರೈಕೆಯಿಂದಾಗಿ ನಮ್ಮ ತಂದೆ ಚೇತರಿಸಿಕೊಳ್ಳುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಅವರು ಸ್ಪಂದಿಸುತ್ತಿದ್ದಾರೆ. ಶೀಘ್ರದಲ್ಲೇ ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳಲಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss