Saturday, June 25, 2022

Latest Posts

ಮಾಜಿ ಸಚಿವ ರೋಷನ್ ಬೇಗ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಐಎಂಎ ಬಹುಕೋಟಿ ವಂಚನೆ ಹಗರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ರೋಷನ್ ಬೇಗ್ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ.

ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೋಷನ್ ಬೇಗ್ ಅವರು ಪರಪ್ಪನ ಅಗ್ರಹಾರ ಜೈಲು ಸೇರಿಕೊಂಡಿದ್ದು, ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ  ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರೋಷನ್ ಬೇಗ್ ಅವರಿಗೆ ಮಧುಮೇಹದ ಸಮಸ್ಯೆಯಿದ್ದು, ಅವರಿಗೆ ಈಗ ಆಕ್ಸಿಜನ್ ಬೆಂಬಲ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಇಂದು ರೋಷನ್ ಅವರನ್ನು  ಸಿಬಿಐ ಕಸ್ಟಡಿಗೆ ಪಡೆಯಬೇಕಿತ್ತು. ಆದರೆ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ವಿಚಾರಣೆ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss