ಹೊಸ ದಿಗಂತ ಆನ್ ಲೈನ್ ಡೆಸ್ಕ್ :
ಮಾಜಿ ಸಚಿವ ರೋಷನ್ ಬೇಗ್ ಅವರನ್ನು ನಗರದ ಜಯದೇವ ಆಸ್ಪತ್ರೆಯಿಂದ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗಿದೆ.
ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಈ ಹಿನ್ನೆಲೆ ಮತ್ತೆ ಜೈಲಿಗೆ ಶಿಫ್ಟ್ ಮಾಡಲಾಗಿದೆ.
ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಜೈಲು ಸೇರಿದ್ದ ರೋಷನ್ ಬೇಗ್ ಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಸಿಬಿಐ ಅವರನ್ನು ವಿಚಾರಣೆ ನಡೆಸುವ ಸಾಧ್ಯತೆಯಿದೆ.