Wednesday, August 10, 2022

Latest Posts

ಮಾಜಿ ಸಿಎಂ ಸಿದ್ದರಾಮಯ್ಯನವರಿಂದ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ: ಗೋವಿಂದ ಕಾರಜೋಳ

ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿಯವರು ಕೊರೋನಾ ಸೋಂಕಿನ ಮಧ್ಯದಲ್ಲಿಯೂ ಸಂಕಷ್ಟದಲ್ಲಿರುವ ಜನರಿಗೆ ಆತ್ಮಸ್ಥೈರ್ಯ ತುಂಬುವ ಜತೆಗೆ ದೇಶದ ಮತ್ತು ರಾಜ್ಯದ ಜನರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ವಿನ: ಕಾರಣ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿರುವುದನ್ನು ನೋಡಿದರೆ ಮೊಸರಲ್ಲಿ ಕಲ್ಲು ಹುಡುಕುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಟೀಕಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ಕೆ ಇಡೀ ದೇಶ ಮತ್ತು ಪ್ರಪಂಚವೇ ಮೆಚ್ಚುಗೆ ವ್ಯಕ್ತಪಡಿಸುತ್ತಿರುವಾಗ ಸುಮ್ಮನೇ ಸಿದ್ಧರಾಮಯ್ಯನವರು ರಾಜಕೀಯ ಮಾತುಗಳನ್ನು ಹೇಳುವ ಮೂಲಕ ಸುಳ್ಳು ಆರೋಪ ಮಾಡುತ್ತಿದ್ದಾರೆ ಛೇಡಿಸಿದರು.
ಗ್ರಾಮ ಪಂಚಾಯ್ತಿ ಚುನಾವಣೆಯನ್ನು ರಾಜ್ಯ ಸರ್ಕಾ ರ ಮುಂದೂಡಿಲ್ಲ,ಈಗ ಕೊರೋನಾ ಸೋಂಕು ಇರುವುದರಿಂದ ಸಾಧಕ ಬಾಧಕಗಳ ಕುರಿತು ನಿರ್ಣಯ ಕೈಗೊಳ್ಳುವುದು ಆಡಳಿತ ಸರ್ಕಾ ರದ ಜವಾಬ್ದಾರಿಯಾಗಿದೆ.ದೇಶದ ಸ್ಥಿತಿಗತಿ,ಕೋವಿಡ್ ಸಮಸ್ಯೆ ಅರ್ಥ ಮಾಡಿಕೊಂಡು ಚುನಾವಣಾ ಆಯೋಗ ಚುನಾವಣೆ ಮುಂದೂಡಿಕೆ ಮಾಡಿರಬಹುದು.ಆದರೆ ಕಾಂಗ್ರೆಸ್ ಪಕ್ಷದವರು ಯಾವುದೇ ಮುಂಜಾಗೃತೆ ಇಲ್ಲದೇ ನ್ಯಾಯಾಲಯದ ಮೊರೆ ಏಕೆ ಹೋಗಿದ್ದಾರೆ.ಕಾಂಗ್ರೆಸ್ನವರು ಹಗಲು ಕನಸು ಕಾಣುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ರಾಜ್ಯ ಸರ್ಕಾರ ಘೋಷಣೆ ಮಾಡಿದ ಪ್ಯಾಕೇಜ್ ಹಣದಲ್ಲಿ ಫಲಾನುಭಿವಿಗಳಿಗೆ ಇನ್ನೂ ತಲುಪಿಲ್ಲ ಎಂದು ಆರೋಪ ಮಾಡುತ್ತಿರುವ ಕಾಂಗ್ರೆಸ್ ನಾಯಕರ ಹೇಳಿಗೆ ತಿರುಗೇಟು ನೀಡಿದ ಡಿಸಿಎಂ ಕಾರಜೋಳ ಮಧ್ಯವರ್ತಿಗಳ ಪಾಲಾಗಬಾರದು ಎಂಬ ಏಕೈಕ ಉದ್ದೇಶದಿಂದ ಸ್ವಲ್ಪ ವಿಳಂಭವಾಗುತ್ತಿದೆ.ಫಲಾನುಭವಿಗಳ ಬ್ಯಾಂಕ ಖಾತೆ ಹಾಗೂ ಸಮಗ್ರ ಮಾಹಿತಿ ತೆಗೆದುಕೊಂಡು ಅವರ ಖಾತೆಗೆ ನೇರವಾಗಿ ಹಣ ವರ್ಗಾ ಯಿಸಲಾಗುತ್ತಿದೆ.ಅಟೋ,ಟ್ಯಾಕ್ಸ್ ಡ್ರೈವಗಳಿಗೆ ಶೀಘ್ರದಲ್ಲೇ ರೂ.5 ಸಾವಿರ ಜಮೆ ಆಗಲಿದೆ ಎಂದು ಉತ್ತರ ನೀಡಿದರು.
ಸಮಾಜ ಕಲ್ಯಾಣ ಇಲಾಖೆಯಡಿ ಭೂಮಿ  ಖರೀದಿಸುವಾಗ ಮಧ್ಯವರ್ತಿಗಳ ಸಂಖ್ಯೆ ಹೆಚ್ಚಾಗಿದೆ.ನೇರವಾಗಿ ಡಿಸಿಯವರ ಖಾತೆಗೆ ಹಣ ವಗರ್ಾವಣೆ ಮಾಡಲಾತ್ತಿದೆ.
ಸುಭದ್ರ ಸರ್ಕಾರ- ಬಿ.ಎಸ್.ಯಡಿಯೂರಪ್ಪನವರೇ ನಮ್ಮ ನಾಯಕರಾಗಿದ್ದಾರೆ.ಅವರ ನೇತೃತ್ವದಲ್ಲಿ ಪೂರ್ಣ ಪ್ರಮಾಣದ ಸುಭದ್ರ ಸಕರ್ಾರ ಇರಲಿದೆ.ಮುಂದಿನ ಮೂರು ವರ್ಷ ಕೂಡ ಯಡಿಯೂರಪ್ಪನವರೇ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಲಿದ್ದಾರೆ ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಹೇಳಿದರು.
ಸಂಸದ ಪಿ.ಸಿ.ಗದ್ದಿಗೌಡರ, ಶಾಸಕ ವೀರಣ್ಣ ಚರಂತಿಮಠ, ಮಾಜಿ ಶಾಸಕ ಪಿ.ಎಚ್.ಪೂಜಾರ ಪತ್ರಿಕಾಗೋಷ್ಠಿಯಲ್ಲಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss