Wednesday, August 17, 2022

Latest Posts

ಮಾಜಿ ಸಿಎಂ ಸಿದ್ದರಾಮಯ್ಯಗೆ ಕೊರೋನಾ ಪಾಸಿಟಿವ್ : ಆಸ್ಪತ್ರೆಗೆ ದಾಖಲು

ಬೆಂಗಳೂರು: ಜ್ವರದಿಂದ ಬಳಲುತ್ತಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೋಮವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ದೃಢಪಟ್ಟಿದೆ.
ಸಿದ್ದರಾಮಯ್ಯನವರಿಗೆ ಮೂತ್ರನಾಳದ ಸಮಸ್ಯೆಯಿದ್ದು, ಎರಡು ದಿನದಿಂದ ಜ್ವರದಿಂದ ಬಳಲುತ್ತಿದ್ದರು. ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಪರೀಕ್ಷೆ ಕೂಡ ಮಾಡಿಸಲಾಗಿತ್ತು. ಫಲಿತಾಂಶದಲ್ಲಿ ಪಾಸಿಟಿವ್ ಬಂದಿದ್ದು ಯಾರೂ ಆತಂಕ ಪಡಬೇಡಿ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ. ಆತಂಕ ಪಡುವ ಅವಶ್ಯ ಇಲ್ಲ. ಕೆಲವು ದಿನದಿಂದ ನನ್ನ ಜೊತೆ ಸಂಪರ್ಕದಲ್ಲಿರುವವರು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಟ್ವೀಟ್ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!