Thursday, August 11, 2022

Latest Posts

ಮಾತೃ ವಂದನಾ ಯೋಜನೆಯಲ್ಲಿ ರಾಜ್ಯ ಕರ್ನಾಟಕ ಆರನೇ ಸ್ಥಾನದಲ್ಲಿ: ಸಚಿವೆ ಶಶಿಕಲಾ ಜೊಲ್ಲೆ

ಹೊಸ ದಿಗಂತ ವರದಿ, ಕೊಪ್ಪಳ:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮನೆ-ಮನೆ ಇಲಾಖೆಯಾಗಿದೆ ಎಂದು ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಶಶಿಕಲಾ ಅ. ಜೊಲ್ಲೆ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಸಮಗ್ರ ಶಿಶು ಅಭಿವೃದ್ಧಿ ಯೋಜನೆ, ಇವರ ಸಹಯೋಗದಲ್ಲಿ ಜಿಲ್ಲೆಯ ಕಾರಟಗಿ ಪಟ್ಟಣದ ಪದ್ಮಶ್ರೀ ಕಲ್ಯಾಣ ಮಂಟಪದಲ್ಲಿ ಭಾನುವಾರ ಹಮ್ಮಿಕೊಂಡ ಪೋಷಣ್ ಅಭಿಯಾನದಡಿ ಸ್ಮಾರ್ಟ್ ಫೋನ್ ವಿತರಣಾ ಹಾಗೂ ಕರೋನಾ ವಾರಿಯರ್ಸ್ಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಗರ್ಭಿಣಿಯರ ಆರೋಗ್ಯದ ಬಗ್ಗೆ ಇಲಾಖೆಯ ಯೋಜನೆಗಳು ಹೆಚ್ಚಿನ ಮಹತ್ವವನ್ನು ನೀಡಿವೆ. ಫೋಷಣ ಅಭಿಯಾನದಡಿ ಸಿಬ್ಬಂದಿಗೆ ಅನುಕೂಲ ಮತ್ತು ಸಹಾಕಾರಿಯಾಗಲು ಸ್ಮಾರ್ಟ್ ಫೋನ್ ಗಳನ್ನು ವಿತರಿಸಲಾಗುತ್ತಿದೆ. ಇವುಗಳಿಂದ ಪ್ರತಿ ಅಂಗನವಾಡಿ ಕೇಂದ್ರಗಳಲ್ಲಿ ನಡೆಯುವ ಕಾರ್ಯ ಪ್ರಗತಿಯನ್ನು ಸಿಬ್ಬಂದಿ ಮೊಬೈಲ್ ಮೂಲಕ ನಮೂದಿಸುತ್ತಾರೆ. ಇದರಿಂದ ಸುಲಭವಾಗಿ ಮಾಹಿತಿ ತಿಳಿಯುತ್ತದೆ. ಮಾತೃ ವಂದನಾ ಯೋಜನೆಯಲ್ಲಿ ನಮ್ಮ ರಾಜ್ಯ ಕರ್ನಾಟಕ ಆರನೇ ಸ್ಥಾನದಲ್ಲಿದೆ ಎಂದರು.
ಕನಕಗಿರಿ ಶಾಸಕ ಬಸವರಾಜ ದಢೇಸುಗೂರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ, ಒಡಹುಟ್ಟಿದ ಅಣ್ಣನಿಲ್ಲದಿದ್ದರೂ ನನಗೆ ಕನಕಗಿರಿ ಕ್ಷೇತ್ರದಲ್ಲಿ ಮಹಿಳೆಯರು ಸಹೋದರನ ಸ್ಥಾನ ದೊರೆತಿದೆ. ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ಬಿಜೆಪಿ ಸರ್ಕಾರ ರೈತಪರವಿದೆ. ಸರ್ವರೂ ಸುಖದಿಂದಿರಲು ನಾನಾ ಜನಪರ ಯೋಜನೆಗಳನ್ನು ಜಾರಿಗೊಳಿಸಿದೆ ಎಂದರು.
ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ, ಕಾಡಾ ಅಧ್ಯಕ್ಷ ತಿಪ್ಪೇರುದ್ರ ಸ್ವಾಮಿ ಮಾತನಾಡಿದರು. ತಾಪಂ ಅಧ್ಯಕ್ಷ ಪ್ರಕಾಶ್ ಭಾವಿ, ಪುರಸಭೆ ಅಧ್ಯಕ್ಷ ಶರಣೇಶ್ ಸಾಲೋಣಿ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಅಕ್ಕಮಹಾದೇವಿ, ಯೋಜನಾ ಅಧಿಕಾರಿ ಮಂಜುನಾಥ, ಎಪಿಎಂಸಿ ಅಧ್ಯಕ್ಷ ಸೋಮಶೇಖರ ಗೌಡ ಮುಸ್ಟೂರು, ಕನಕಗಿರಿ ಶಿಶು ಅಭಿವೃದ್ಧಿ ಅಧಿಕಾರಿ ಶ್ವೇತಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss