ಹೊಸದಿಗಂತ ವರದಿ ಬಳ್ಳಾರಿ:
ಮಹಿಳೆಯೋಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹೊಸಪೇಟೆ ಯಲ್ಲಿ ನಡೆದಿದೆ. ಗ್ರಾಮೀಣ ಕ್ಷೇತ್ರ ವ್ಯಾಪ್ತಿಯ ನಾಗಮ್ಮ(45) ಕೊಲೆಯಾದ ಮಹಿಳೆ. ಕೃಷಿ ಕೆಲಸಕ್ಕೆ ತೆರಳುವ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಶನಿವಾರ ತಡ ರಾತ್ರಿ ನಡೆದಿದ್ದು ಭಾನುವಾರ ಶವ ಪತ್ತೆಯಾಗಿದೆ. ಬೆಳ್ಳಂ ಬೆಳಗ್ಗೆ ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೃಷಿ ಕೆಲಸ ಹೋಗುತ್ತಿದ್ದ ಮಹಿಳೆಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಕುಡಗೋಲಿನಿಂದ ಕುತ್ತಿಗೆ ಕೊಯ್ದು ಹಾಗೂ ತಲೆಗೆ ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.
ಸ್ಥಳಕ್ಕೆ ಡಿವೈಎಸ್ಪಿ ರಘುಕುಮಾರ ಹಾಗೂ ಗ್ರಾಮೀಣ ಠಾಣೆಯ ಪಿಐ ಶ್ರೀನಿವಾಸ ಮೇಟಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.