ಹೊಸದಿಗಂತ ಆನ್ ಲೈನ್ ಡೆಸ್ಕ್:
ತೈಲ ಸಂಪದ್ಭರಿತವಾದ ಯೆಮನ್ ನ ಮಾರಿಬ್ ಪ್ರಾಂತ್ಯದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಹೌತಿ ಬಂಡುಕೋರರು ಎರಡು ಬಾರಿ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ ನಡೆಸಿದ್ದಾರೆ.
ಈ ಬೃಹತ್ ಸ್ಫೋಟದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಯೊಬ್ಬರು ಕ್ಸಿನ್ಹುವಾ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಸೌದಿ ಬೆಂಬಲಿತ ಯೆಮನ್ ಸೇನೆಯ ಮೇಲೆ ಹೌತಿ ಬಂಡುಕೋರರು ದಾಳಿ ಮುಂದುವರೆಸಿದ್ದಾರೆ. ಇಂದು ನಡೆದ ಕ್ಷಿಪಣಿ ದಾಳಿಯಿಂದ ಸುಮಾರು 30 ಸೈನಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳು ವೈದ್ಯಕೀಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾರಿಬ್ನ ಸಾರ್ವಜನಿಕ ಆಸ್ಪತ್ರೆಯ ಮೂಲಗಳು ತಿಳಿಸಿವೆ.