Saturday, July 2, 2022

Latest Posts

ಮೀನುಗಾರರು ಆಧುನಿಕ ತಂತ್ರಜ್ಞಾನ ಬಳಸಿಕೊಂಡು, ಆದಾಯ ಗಳಿಸುವ ಬಗ್ಗೆ ಪರಿಣಿತರ ಜತೆ ಚರ್ಚೆ: ಸಂಸದ ರಾಘವೇಂದ್ರ

ಹೊಸ ದಿಗಂತ ವರದಿ, ಶಿವಮೊಗ್ಗ:

ಮೀನುಗಾರರು ಬದುಕು ಹವಾಮಾನ ವೈಪರೀತ್ಯದಿಂದ ನಾಶವಾಗದಂತೆ ಆಧುನಿಕ ತಂತ್ರಜ್ಞಾನ ಬಳಸಿಕೊಂಡು ವೈಜ್ಞಾನಿಕವಾಗಿ ಹೆಚ್ಚು ಆದಾಯಗಳಿಸುವ ರೀತಿಯಲ್ಲಿ ಪರಿಣಿತರ ಜತೆ ಚರ್ಚಿಸಲಾಗುತ್ತಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ತಿಳಿಸಿದರು.
ಶಿಕಾರಿಪುರ ತಾಪಂ ಸಭಾಂಗಣದಲ್ಲಿ ಜಿಪಂ, ಮೀನುಗಾರಿಕಾ ಇಲಾಖೆ ವತಿಯಿಂದ ನಡೆದ ಪ್ರಧಾನಮಂತ್ರಿ ಮತ್ಸ ಸಂಪದ ಯೋಜನೆ ಮತ್ತು ಇಲಾಖಾ ಯೋಜನೆಗಳ ಬಗ್ಗೆ ನಡೆದ ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಚುನಾವಣಾ ಪ್ರಚಾರಕ್ಕಾಗಿ ಮಂಗಳೂರಿಗೆ ಧಾವಿಸಿದ್ದ ಅಮಿತ್‌ ಶಾ ಕೇಂದ್ರದಲ್ಲಿ ಸರ್ಕಾರ ರಚನೆಯಾದ ನಂತರದಲ್ಲಿ ಮೀನುಗಾರರಿಗೆ ಬಹು ದೊಡ್ಡ ಪ್ಯಾಕೇಜ್ ನೀಡುವುದಾಗಿ ಘೋಷಿಸಿದ ರೀತಿಯಲ್ಲಿ ಪ್ರಧಾನಮಂತ್ರಿ ಮತ್ಸ ಸಂಪದ ಯೋಜನೆಯನ್ನು ಜಾರಿಗೊಳಿಸಿದ್ದಾರೆ. ಮೀನುಗಾರರ ಯುವ ಪೀಳಿಗೆಯಲ್ಲಿ ವಿದ್ಯಾವಂತರು ಹೆಚ್ಚಿದ್ದು ಹೈದರಾಬಾದ್ ಮತ್ತಿತರ ಭಾಗದಲ್ಲಿನ ದೊಡ್ಡ ಬಂಡವಾಳಶಾಹಿಗಳು ಮೀನುಗಾರಿಕೆ ಉದ್ಯಮದಲ್ಲಿ ಬಂಡವಾಳ ಹೂಡಲು ಉತ್ಸುಕರಾಗಿದ್ದಾರೆ. ಮತ್ಸ ಸಂಪದ ಯೋಜನೆ ನಾಮಕಾವಸ್ತೆಯಾಗದಂತೆ ಯುವಪೀಳಿಗೆ ತಂತ್ರಜ್ಞಾನ ಬಳಸಿಕೊಂಡು ವೈಜ್ಞಾನಿಕವಾಗಿ ಹೆಚ್ಚು ಆದಾಯಗಳಿಸುವ ನಿಟ್ಟಿನಲ್ಲಿ ತಜ್ಞರ ಜತೆ ಆಧುನಿಕ ಮೀನುಗಾರಿಕೆ ಬಗ್ಗೆ ಚರ್ಚಿಸಲಾಗುತ್ತಿದೆ ಎಂದರು.
ಎಂಎಡಿಬಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ಮೀನುಗಾರಿಕೆ ಜಿಲ್ಲಾ ಉಪನಿರ್ದೇಶಕ ಜಿ.ಎಸ್ ಷಡಾಕ್ಷರಿ , ತಾ.ಪಂ ಅಧ್ಯಕ್ಷ ಸುರೇಶ್‌ನಾಯ್ಕ,ಇಒ ಪರಮೇಶ್, ಕೆಪಿಟಿಸಿಎಲ್ ನಿರ್ದೇಶಕ ರಾಮಾನಾಯ್ಕ, ತಾಂಡಾ ಅಭಿವೃದ್ಧಿ ನಿಗಮದ ನಿರ್ದೇಶಕಿ ಸವಿತಾಬಾಯಿ, ಮೀನುಗಾರಿಗೆ ಇಲಾಖೆ ಸಹಾಯಕ ನಿರ್ದೇಶಕ ಬಿ.ಡಿ.ಕಿರಣ್ ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss