Thursday, August 11, 2022

Latest Posts

ಮೀನುಗಾರಿಕೆ ಇಲಾಖೆಯ ಅಂಕಿ-ಅಂಶಗಳ ಸಂಚಿಕೆ ಬಿಡುಗಡೆ

ಉಡುಪಿ: ಮೀನು ಕೃಷಿಕರ ದಿನಾಚರಣೆ ಹಾಗೂ ಮೀನುಗಾರಿಕೆ ಇಲಾಖೆಯ 2013ರಿಂದ 2018ರ ವರೆಗಿನ ಐದು ವರ್ಷಗಳ ಮಾಹಿತಿಯನ್ನೊಳಗೊಂಡ ಅಂಕಿ-ಅಂಶಗಳ ಸಂಚಿಕೆ ಬಿಡುಗಡೆ ಕಾರ್ಯಕ್ರಮ ಗುರುವಾರ ಬೆಂಗಳೂರಿನಲ್ಲಿ ಮುಖ್ಯ ಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯಿತು.
ಮೀನುಗಾರಿಕೆ ಇಲಾಖೆಯ 2013-14ರಿಂದ 2018-19ರ ವರೆಗಿನ ಮಾಹಿತಿಯನ್ನು ಒಳಗೊಂಡ ಅಂಕಿ-ಅಂಶಗಳ ಸಂಚಿಕೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಿಡುಗಡೆಗೊಳಿಸಿದರು.
ಈ ಕಾರ್ಯಕ್ರಮದಲ್ಲಿ ಮೀನುಗಾರಿಕೆಯಲ್ಲಿ ನಿರತರಾಗಿದ್ದ ವೇಳೆ ಮೃತಪಟ್ಟ ಮೀನುಗಾರರಿಗೆ ಸಂಕಷ್ಟ ಪರಿಹಾರ ನಿಧಿಯಿಂದ ಮಂಜೂರುಗೊಂಡ ತಲಾ 6ಲಕ್ಷ ರೂ. ಮೊತ್ತದ ಚೆಕ್‌ಗಳನ್ನು ವಿತರಿಸಲಾಯಿತು. ಉಡುಪಿ ವಿಧಾನಸಭಾ ಕ್ಷೇತ್ರದ ಕೊಡವೂರಿನ ಮೃತ ಜಯ ಸಾಲ್ಯಾನ್ ಅವರ ಪತ್ನಿ ವಿನಯ ಜೆ. ಸಾಲ್ಯಾನ್ ಅವರಿಗೆ ಚೆಕ್ಕನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕಂದಾಯ ಸಚಿವ ಆರ್. ಅಶೋಕ್, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್, ಉಡುಪಿ ಶಾಸಕ ಕೆ. ರಘುಪತಿ ಭಟ್, ಮೀನುಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕ್ಯಾ. ಮಣಿವಣ್ಣನ್, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss