Wednesday, August 10, 2022

Latest Posts

ಮುಂಗಾರು ಚುರುಕು| ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಚುರುಕುಗೊಂಡಿದ್ದು, ಜಿಲ್ಲೆಯ ಬಹುತೇಕ ಎಲ್ಲ ಪ್ರದೇಶಗಳಲ್ಲಿ ಬುಧವಾರ ಭಾರಿ ಮಳೆಯಾಗಿದೆ.
ನಗರದಲ್ಲಿ ಮಂಗಳವಾರ ತಡರಾತ್ರಿಯಿಂದ ಬೆಳಗ್ಗಿನವರೆಗೆ ಉತ್ತಮ ಮಳೆ ಸುರಿದಿದೆ. ಬುಧವಾರ ಬೆಳಗ್ಗೆ ಮೋಡ ಕವಿದ ವಾತಾವರಣದೊಂದಿಗೆ ಭಾರಿ ಮಳೆ ಸುರಿಯಿತು. ಬಳಿಕ ಇದೇ ವಾತಾವರಣ ಮುಂದುವರೆದಿದ್ದು, ಮಧ್ಯಾಹ್ನವೂ ಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ರಾತ್ರಿಯೂ ಭಾರಿ ಮಳೆ ಮುಂದುವರೆದರೆ ನಗರದ ತಗ್ಗುಪ್ರದೇಶಗಳು ಕೃತಕ ನೆರೆಗೆ ಮುಳುಗಡೆಯಾಗುವ ಸಾಧ್ಯತೆಯಿದೆ.
ಭಾರಿ ಮಳೆಯಿಂದ ನಗರದ ತಾಪಮಾನದಲ್ಲಿ ಇಳಿಕೆ ಕಂಡುಬಂದಿದೆ. ಮುಂದಿನ 48 ಗಂಟೆ ಅವಯಲ್ಲಿ ಕರಾವಳಿಯ ಎಲ್ಲ ಜಿಲ್ಲೆಗಳ ಅಲ್ಲಲ್ಲಿ ಚದುರಿದಂತೆ ಭಾರಿ ಮಳೆ ಬೀಳುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss