Thursday, August 18, 2022

Latest Posts

ಮುಂದಿನ ಎರಡೂವರೆ ವರ್ಷವೂ ಬಿ.ಎಸ್.ಯಡಿಯೂರಪ್ಪ ಅಧಿಕಾರ: ಸಚಿವ ರಮೇಶ ಜಾರಕಿಹೊಳಿ

ಬೆಳಗಾವಿ: ನಾನು ಬಿಜೆಪಿಯ ಸಾಮಾನ್ಯ ಕಾರ್ಯಕರ್ತ. ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ನನಗೆ ಗೋತ್ತಿಲ್ಲ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು.
ಅವರು ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಒಬ್ಬ ಪಕ್ಷದ ಸಾಮಾನ್ಯ ಕಾರ್ಯಕರ್ತ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ನಿರ್ಣಯ ಕೈಗೊಳ್ಳುತ್ತದೆ ಎಂದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ರಚನೆಯಾಗಿ ಒಂದು‌ ವರ್ಷ ಪೂರೈಸಿದೆ ಅದಕ್ಕೆ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ.
ವಿಶೇಷ ಸಮಯದಲ್ಲಿ ರಾಜ್ಯದಲ್ಲಿ ಅಧಿಕಾರ ಹಿಡಿದು ಸಾಲು ಸಾಲು ಸಮಸ್ಯೆಗಳನ್ನು ಎದುರಿಸಿ ಜನರ ಸಂಕಷ್ಟಗಳನ್ನು ದೂರ ಮಾಡಿ‌ ಅವರು ಜನರ ಮನಸ್ಸು ಗೆದ್ದಿದ್ದಾರೆ.
ಅದರಂತೆ ಮುಂದಿನ ಎರಡೂವರೆ ವರ್ಷವೂ ಬಿ.ಎಸ್.ಯಡಿಯೂರಪ್ಪ ಉತ್ತಮ ಆಡಳಿತ ನೀಡುತ್ತಾರೆ.ಅಲ್ಲದೆ ಮುಂದಿನ 2023 ರ ವಿಧಾನಸಭೆ ‌ಚುನಾವಣೆಯಲ್ಲಿ ಸಹ ಯಡಿಯೂರಪ್ಪ ‌ನೇತೃತ್ವದಲ್ಲಿಯೇ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು.
ಸಾವು ಬದುಕು ನಮ್ಮ ಕೈಯಲ್ಲಿ ಇಲ್ಲ. ಮುಂದಿನ ದಿನಗಳಲ್ಲಿ ಕೋವಿಡ್ ಮಧ್ಯೆಯೇ ನಾವೆಲ್ಲರೂ ಬದುಕುವ ಪರಿಸ್ಥಿತಿ ಬಂದಿದೆ. ಮಾಧ್ಯಮದವರು ಸ್ಪಲ್ಪ ಕೋವಿಡ್ ವಾಡ್೯ಗೆ ಹೋಗಿ ಬನ್ನಿ ತಿಳಿಯುತ್ತದೆ. ಅಧಿಕಾರಿಗಳು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ.
ಹೋರಾಟ ಮಾಡಿ ಬದುಕಿಸುವ ಪ್ರಯತ್ನ ಮಾಡಬೇಕೆಂದರು.
ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ದೆಹಲಿ ಭೇಟಿ ನೀಡಿದ ವಿಷಯವಾಗಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ಅವರು, ಮುಖ್ಯಮಂತ್ರಿ ಬದಲಾವಣೆ ಯಾವುದೇ ಕಾರಣಕ್ಕೂ ಇಲ್ಲ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ನಾನು ಭೇಟಿ ಮಾಡಿದ್ದು ಅವರು ನಮ್ಮ ಪಕ್ಷದ ನಾಯಕರು ಯಾವುದೇ ಕಾರಣಕ್ಕೂ ಬಿ.ಎಸ್.ಯಡಿಯೂರಪ್ಪ ಬದಲಾವಣೆ ಮಾಡುವುದಲ್ಲ. ಅದು ಮಾಧ್ಯಮದವರ ಸೃಷ್ಟಿ ಎಂದರು.
ಡಿಸಿಎಂ ಲಕ್ಷ್ಮಣ ಸವದಿ ಅವರು ಸಾರಿಗೆ ಇಲಾಖೆಯ ವುಚಾರವಾಗಿ ಕೇಂದ್ರ ಸಚಿವ ನಿತೀನ್ ಗಡ್ಕರ್ ಭೇಟಿಯಾಗಿ ಚರ್ಚಿಸಲು ದೆಹಲಿಗೆ ಹೋಗಿದ್ದಾರೆ. ಇದರಲ್ಲಿ ಯಾವುದೇ ವಿಶೇಷತೆ ಇಲ್ಲ. ಕಾಂಗ್ರೆಸ್, ಜೆಡಿಎಸ್ ತನ್ನ ಕೆಲಸ ಮಾಡಲಿ ಈಗ ಒಳ್ಳೆಯ ವಾತಾವರಣ ಇದೆ ಎಂದು ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!