ಬೆಂಗಳೂರು: ಕೆಲ ಜಿಲ್ಲೆಗಳಲ್ಲಿ ಒಂದೇ ಸಮನೆ ಮಳೆಯಾಗುತ್ತಿತ್ತು. ಒಂದೆರಡು ದಿನಗಳಿಂದ ಮಳೆ ಸ್ವಲ್ಪ ಬಿಡುವು ಪಡೆದಿದೆ. ಆದರೆ ಈ ಭಾರಿ ಮಳೆಯು ಸರಿಯಾಗಿ ಆಗದಿದ್ದ ಕಾರಣ ಜಲಾಶಯಗಳು ಇನ್ನೂ ತುಂಬಿಲ್ಲ.
ಇದರ ಮಧ್ಯೆ ಹವಾಮಾನ ಇಲಾಖೆ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ತಿಳಿಸಿದ್ದು, ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಐದು ದಿನಗಳ ಕಾಲ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅದೇ ರೀತಿ ಶಿವಮೊಗ್ಗ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಒಳನಾಡಿನ ಬೀದರ್ ಹಾಗೂ ಕಲಬುರ್ಗಿಯಲ್ಲಿ ಮುಂದಿನ ಎರಡು ದಿನಗಳ ಕಾಲ ಯಲ್ಲೋ ಅಲರ್ಟ್ ಘೋಷಿಸಿದ್ದರೆ, ಧಾರವಾಡ ಮತ್ತು ಗದಗದಲ್ಲಿ ಜುಲೈ 30 ಹಾಗೂ ವಿಜಯಪುರದಲ್ಲಿ ಜುಲೈ 31ರಂದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ.