Monday, August 8, 2022

Latest Posts

ಮುಂದಿನ ವರ್ಷ ಫೆ.3-7 ರ ವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ ಏಷ್ಯಾದ ಅತಿದೊಡ್ಡ ಏರೋ ಪ್ರದರ್ಶನ

ನವದೆಹಲಿ: ಏಷ್ಯಾದ ಅತಿದೊಡ್ಡ ಏರೋ ಪ್ರದರ್ಶನವಾಗಿರುವ ಏರೋ ಇಂಡಿಯಾ ತನ್ನ ಪಾರಂಪರಿಕ ತಾಣವಾಗಿರುವ ಬೆಂಗಳೂರಿನಲ್ಲಿ ಮುಂದಿನ ವರ್ಷ ಫೆಬ್ರವರಿ 3ರಿಂದ 7ರನಡುವೆ ನಡೆಯಲಿದೆ ಎಂದು ಅಧಿಕೃತ ಮೂಲಗಳು ಹೇಳಿದೆ.
ಏರೋ ಇಂಡಿಯಾ ವೈಮಾನಿಕ ಪ್ರದರ್ಶವನ್ನು 1996ರಿಂದಲೂ ಬೆಂಗಳೂರಿನಲ್ಲಿಯೇ ಆಯೋಜಿಸಲಾಗುತ್ತಿದೆ. 13ನೇ ಆವೃತ್ತಿಯ ಏರೋ ಇಂಡಿಯಾ 2021ರ ಫೆಬ್ರುವರಿ 3ರಿಂದ 7ರ ವರೆಗೂ ನಡೆಯಲಿದೆ.
ದೇಶೀಯ ರಕ್ಷಣಾ ಉದ್ಯಮ ಮತ್ತು ಜಾಗತಿಕ ವೈಮಾನಿಕ ಸಂಸ್ಥೆಗಳ ಒತ್ತಾಸೆಯ ಮೇರೆಗೆ ಎರಡು ವರ್ಷಗಳಿಗೊಮ್ಮೆ ನಡೆಯುವ ಈ ವೈಮಾನಿಕ ಪ್ರದರ್ಶನ ನಡೆಸಲು ಸಚಿವಾಲಯ ನಿರ್ಧಾರ ಕೈಗೊಂಡಿದೆ ಎಂದು ಮೂಲಗಳು ವಿವರಿಸಿದೆ.
ಕೋವಿಡ್‌ ಪರಿಸ್ಥಿತಿಯ ನಡುವೆ ಜಾಗತಿಕ ಪ್ರಮುಖ ವೈಮಾನಿಕ ಸಂಸ್ಥೆಗಳು ಹಾಗೂ ಸ್ಥಳೀಯ ರಕ್ಷಣಾ ವಲಯದ ಕೈಗಾರಿಕೆಗಳಿಂದ ಮಾಹಿತಿ ಪಡೆದು ಈ ನಿರ್ಧಾರ ಕೈಗೊಳ್ಳಲಾಗಿದೆ.
ವೈಮಾನಿಕ ಪ್ರದರ್ಶನ ಆಯೋಜನೆಯ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಈಗಾಗಲೇ ಹಲವು ಬಾರಿ ಆಂತರಿಕ ಸಭೆಗಳನ್ನು ನಡೆಸಿದ್ದಾರೆ. ಕೊರೊನಾ ವೈರಸ್‌ ಸಾಂಕ್ರಾಮಿಕದ ಬಗ್ಗೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಮೂಲಕ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಿರುವುದಾಗಿ ಮೂಲಗಳು ತಿಳಿಸಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss