Monday, August 8, 2022

Latest Posts

ಮುಂದುವರಿದ ಕೊರೋನಾ ಭೀತಿ: ರಾಮನಗರದಲ್ಲಿ 76 ಕೊರೋನಾ ಪಾಸಿಟಿವ್ ಪ್ರಕರಣ ದೃಢ

ರಾಮನಗರ: ಜಿಲ್ಲೆಯಲ್ಲಿ ಚನ್ನಪಟ್ಟಣ 20, ಕನಕಪುರ17, ಮಾಗಡಿ 8 ಮತ್ತು ರಾಮನಗರ 31 ಪ್ರಕರಣಗಳು ಸೇರಿ ಒಟ್ಟು 76 ಕರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇವರನ್ನು ರಾಮನಗರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಕೋವಿಡ್-19 ಆಸ್ಪತ್ರೆಗಳಿಗೆ ದಾಖಲಿಸಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದ್ದಾರೆ.
ಒಟ್ಟು ಪ್ರಕರಣ: ಇದುವರೆಗೆ ಜಿಲ್ಲೆಯಲ್ಲಿ 1746 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಚನ್ನಪಟ್ಟಣ 395, ಕನಕಪುರ346, ಮಾಗಡಿ 313 ಮತ್ತು ರಾಮನಗರ 692  ಪ್ರಕರಣಗಳು ಸೇರಿವೆ.
ಗುಣಮುಖ: ಚನ್ನಪಟ್ಟಣ ತಾಲ್ಲೂಕಿನಲ್ಲಿ 10, ಕನಕಪುರ ತಾಲ್ಲೂಕಿನಲ್ಲಿ 26 ಹಾಗೂ ರಾಮನಗರ ತಾಲ್ಲೂಕಿನಲ್ಲಿ 55 ಜನ ಸೇರಿ ಒಟ್ಟಾರೆ 94 ಜನರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು839 ಜನರು ಗುಣಮುಖರಾಗಿದ್ದಾರೆ. ಈ ಪೈಕಿ ಚನ್ನಪಟ್ಟಣ 154, ಕನಕಪುರ 194, ಮಾಗಡಿ 188 ಮತ್ತು ರಾಮನಗರ 303ಜನರು ಸೇರಿದ್ದಾರೆ.
ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ದಾಖಲಾಗಿರುವ 1746 ಪ್ರಕರಣಗಳ ಪೈಕಿ 839 ಜನರು ಗುಣಮುಖರಾಗಿದ್ದಾರೆ, ಇನ್ನೂ 887 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಒಟ್ಟು 887 ಸಕ್ರಿಯ ಪ್ರಕರಣಗಳ ಪೈಕಿ ಚನ್ನಪಟ್ಟಣ 239, ಕನಕಪುರ 148, ಮಾಗಡಿ 116  ಮತ್ತು ರಾಮನಗರ 384 ಪ್ರಕರಣಗಳು ಸೇರಿವೆ.
ಸಾವು: ಜಿಲ್ಲೆಯಲ್ಲಿ ಇದುವರೆಗೆ ಚನ್ನಪಟ್ಟಣ ತಾಲ್ಲೂಕಿನಲ್ಲಿ 2, ಕನಕಪುರ ತಾಲ್ಲೂಕಿನಲ್ಲಿ 4, ಮಾಗಡಿ ತಾಲ್ಲೂಕಿನಲ್ಲಿ 9  ಜನ ಹಾಗೂ ರಾಮನಗರ ತಾಲ್ಲೂಕಿನಲ್ಲಿ5 ಜನ ಸಾವನ್ನಪ್ಪಿದ್ದಾರೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 20 ಮಂದಿ ನಿಧನರಾಗಿದ್ದಾರೆ.
ಜಿಲ್ಲಾ ಆರೋಗ್ಯ ಇಲಾಖೆ ವರದಿ: ಕೋವಿಡ್ ನಿಯಂತ್ರಣ ಕುರಿತಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಬಿಡುಗಡೆ ಮಾಡಿರುವ ವರದಿಯಲ್ಲಿ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ 19597 (ಹೊಸದಾಗಿ 311 ಸೇರಿ). ಒಟ್ಟು 9575 ಜನ 14  ದಿನಗಳ ನಿಗಾ ಅವಧಿ ಪೂರೈಸಿದ್ದಾರೆ. ೩೦೫ ಜನರು ಹೋಂ ಕ್ವಾರಂಟೈನ್ ಅವಧಿಯನ್ನು ಪೂರೈಸಿದ್ದು, ಇವರ ಒಟ್ಟಾರೆ ಸಂಖ್ಯೆ 5345ಗೆ ಏರಿಕೆಯಾಗಿದೆ.
ಜ್ವರ ತಪಾಸಣೆ: ಜ್ವರ ತಪಾಸಣಾ ಕೇಂದ್ರದಲ್ಲಿ 25  ಜನರು ತಪಾಸಣೆಗೆ ಒಳಗಾಗಿದ್ದಾರೆ, ಒಟ್ಟಾರೆಯಾಗಿ 4368 ಮಂದಿ ತಪಾಸಣೆಗೆ ಮಾಡಿಸಿಕೊಂಡಿದ್ದಾರೆ.
ಕ್ವಾರಂಟೈನ್ : ಒಟ್ಟು 14 ಜನರು ಸೌಲಭ್ಯದೊಂದಿಗೆ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ನಿಗಾದಲ್ಲಿದ್ದಾರೆ. ಒಟ್ಟಾರೆ ಇನ್ಸ್ಟ್ಯೂಷನಲ್ ಕ್ವಾರೆಂಟೈನ್ ಸಂಖ್ಯೆ ೧ಕ್ಕೆ ಇಳಿಕೆಯಾಗಿದೆ.
ಮಾದರಿ ಸಂಗ್ರಹ: ಹೊಸದಾಗಿ 311 ಮಾದರಿಗಳನ್ನು ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. ಇದುವರೆಗೆ ಒಟ್ಟು 20151 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಒಟ್ಟು 17643 ಪರೀಕ್ಷಾ ವರದಿಯ ಫಲಿತಾಂಶ ನಕಾರಾತ್ಮಕವಾಗಿರುತ್ತದೆ. 45 ಬಾಕಿ ವರದಿ ಸೇರಿ ಒಟ್ಟು 501  ಪ್ರಕರಣಗಳ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss