ಹೊಸದಿಗಂತ ಆನ್ ಲೈನ್ ಡೆಸ್ಕ್:
ಕೇಂದ್ರ ಸರ್ಕಾರ ಜಾರಿಗೊಳಿಸಿದ ನೂತನ ಕೃಷಿ ಮಸೂದೆ ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಮುಂದುವರೆದಿದ್ದು, ಇಂದು ಕೇಂದ್ರ ಸರ್ಕಾರ ಹಾಗೂ ರೈತರ ನಡುವೆ 11ನೇ ಸುತ್ತಿನ ಮಾತುಕತೆ ನಡೆಯಲಿದೆ.
ರೈತರ ಮನವೊಲಿಸಲು ಕೇಂದ್ರ ಸರ್ಕಾರ ಪ್ರಸ್ತಾವನೆಯೊಂದನ್ನು ನೀಡಿತ್ತು, ಆದರೆ ಭಾರತೀಯ ಕಿಸಾನ್ ಯೂನಿಯನ್ ಸಭೆ ನಡೆಸಿ ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ತಿರಸ್ಕರಿಸಿಲಾಗಿದೆ ಎಂದು ತಿಳಿದುಬಂದಿದೆ.
ಈ ಹಿನ್ನೆಲೆ ಇಂದು ಮತ್ತೆ ರೈತ ಮುಖಂಡರು ಹಾಗೂ ಕೇಂದ್ರ ಸರ್ಕಾರದ ನಡುವೆ ಮಾತುಕತೆ ನಡೆಯಲಿದ್ದು, ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಮುಂದುವರೆಯುವ ಸಾಧ್ಯತೆ ಇದೆ.
ಈ ಬಗ್ಗೆ ಚರ್ಚಿಸಲು ಕೃಷಿ ಸಚಿವ ನರೇಂದ್ರ ಸಿಮಗ್ ತೋಮರ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.