Saturday, July 2, 2022

Latest Posts

ಮುಂದುವರೆದ ಕೊರೋನಾ ಅಟ್ಟಹಾಸ: ಹಾಸನದಲ್ಲಿ ಕೊರೋನಾಕ್ಕೆ ಮತ್ತೊಂದು ಬಲಿ

ಹಾಸನ: ಹಾಸನದಲ್ಲಿ ಕೊರೊನಾ ಸಾವಿನ ಸರಣಿ ಮುಂದುವರೆದಿದ್ದು,ಚಿಕಿತ್ಸೆ ಫಲಿಸದೆ ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ.

ಹಾಸನ ತಾಲೂಕಿನ 65 ವರ್ಷದ ವೃದ್ಧೆ ಸಾವನ್ನಪ್ಪಿದ್ದು,ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಾವಿನ ಓಟ 24ಕ್ಕೆ ಏರಿಕೆಯಾಗಿದೆ.
ಜು.9 ರಂದು ಕೊರೋನಾ ಶಂಕೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆಗೆ,ಜು.12 ರಂದು ಕೊರೋನಾ ಪಾಸಿಟಿವ್ ಇರುವುದು ದೃಢಪಟ್ಟಿತ್ತು.

ಸೋಂಕಿತ ವೃದ್ಧೆಯು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು,ಎರಡು ಬಾರಿ ಡಯಾಲಿಸಿಸ್ ಮಾಡಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ಕೋವಿಡ ಆಸ್ಪತ್ರೆ ವೈದ್ಯರು ಸ್ಪಷ್ಟ ಪಡಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss