ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಮಹಾರಾಷ್ಟ್ರದ ಹಲವೆಡೆ ಶನಿವಾರ ರಾತ್ರಿಯಿಂದ ಭಾರೀ ಮಳೆಯಾಗುತ್ತಿದ್ದು, ನಿರಂತರವಾಗಿ ಸುರಿಯುತ್ತಿದ್ದ ಮಳೆಯಿಂದ ಚೆಂಬೂರ್ ಬಹುದೊಡ್ಡ ಅವಗಢ ಸಂಭವಿಸಿದೆ.
ಚೆಂಬೂರಿನ ಭಾರತಿ ನಗರ ಪ್ರದೇಶದಲ್ಲಿ ಕಾಂಪೌಂಡ್ ಗೋಡೆ ಗುಡಿಸಲುಗಳು ಮೇಲೆ ಬಿದಿದ್ದು, ಈ ವೇಳೆ ಅಲ್ಲಿದ್ದ ಸುಮಾರು 11 ಮಂದಿ ಮೃತಪಟ್ಟಿದ್ದಾರೆ. ಹಲವರು ಅವಶೇಷಗಳಡಿ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ.
ಮಳೆಯಿಂದ ಭೂಕುಸಿತವಾಗಿ ಮನೆಗಳು ಬಿದ್ದಿವೆ. 4 ಮನೆಗಳಿಗೆ ಹಾನಿಯಾಗಿದ್ದು 13 ಜನರನ್ನು ರಕ್ಷಿಸಲಾಗಿದೆ ಎಂದು ಅಗ್ನಿಶಾಮಕದಳದ ಸಿಬ್ಬಂದಿ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ 2 ತಂಡ ದೌಡಾಯಿಸಿದ್ದು, ಅಗ್ನಿ ಶಾಮಕ ದಳದೊಂದಿಗೆ ಸೇರಿ ಜಂಟಿ ಕಾರ್ಯಾಚರಣೆ ನಡೆಸುತ್ತಿವೆ.
Maharashtra | 11 people killed after a wall collapse on some shanties in Chembur's Bharat Nagar area due to a landslide, says National Disaster Response Force (NDRF)
Rescue operation is underway. pic.twitter.com/W24NJFWThU
— ANI (@ANI) July 18, 2021