ಮುಂಬೈ: ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ನಿಧನ

0
184

ಮುಂಬೈ: ಕ್ಯಾನ್ಸರ್ ನಿಂದ ಬಳಲುತ್ತಿರುವ ಹಿರಿಯ ಬಾಲಿವುಡ್ ನಟ ರಿಷಿ ಕಪೂರ್ (67) ಅವರು ಇಂದು ನಿಧನರಾಗಿದ್ದಾರೆ.

ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ರಿಷಿ ಕಪೂರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮುಂಬೈನ ಹೆಚ್ ಎನ್ ರಿಲಯನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಈ ಬಗ್ಗೆ ಅಮಿತಾಬ್ ಬಚನ್ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದು, ಅವರು ಅತೀವ ದುಃಖಿತರಾಗಿದ್ದಾರೆಂದು ತಿಳಿಸಿದ್ದಾರೆ. ಬಹುಭಾಷ ನಟ ರಜಿನಿಕಾಂತ್ ಕೂಡ ತಮ್ಮ ಆಪ್ತ ಸ್ನೇಹಿತನನ್ನು ಕಳೆದುಕೊಂಡಿರುವುದಾಗಿ ಟ್ವೀಟ್ ಮಾಡಿದ್ದಾರೆ.

 

LEAVE A REPLY

Please enter your comment!
Please enter your name here